ಬೆಂಗಳೂರು: ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಲೋಕ ಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ವರಿಷ್ಠ ಎಚ್ ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ತೀವ್ರ ಜಿದ್ದಾಜಿದ್ದಿಯಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ವಿರುದ್ಧ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಜೆಡಿಎಸ್ ತನ್ನ ಕ್ಷೇತ್ರವನ್ನು ಮರುವಶಪಡಿಸಿಕೊಂಡಿದೆ. ಹಿಂದಿನ ಚುನಾವಣೆಯಲ್ಲಿ ಇದನ್ನು ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ನಾನಾ ರಾಜಕೀಯ ಚಟುವಟಿಕೆ ಬಳಿಕ ಗೆಲುವು ಕಂಡಿದ್ದರು.
ಈ ಕ್ಷೇತ್ರವು 2009 ಮತ್ತು 2019 ರ ನಡುವೆ ಎರಡು ಉಪಚುನಾವಣೆಗಳಿಗೆ ಸಾಕ್ಷಿಯಾಗಿದೆ. 2009 ರವರೆಗೆ ಸತತ ಮೂರು ಅವಧಿಗೆ ಕನ್ನಡ ಚಲನಚಿತ್ರ ತಾರೆ ಅಂಬರೀಶ್ ಇಲ್ಲಿ ಗೆದ್ದಿದ್ದರು. ಅವರ ಪತ್ನಿ ಸುಮಲತಾ 2019 ರಲ್ಲಿ ಸ್ಪರ್ಧಿಸಿ ಗೆದ್ದರು. 2013ರಲ್ಲಿ ಜೆಡಿಎಸ್ ನಿಂದ ಶಾಸಕರಾಗಿ ಆಯ್ಕೆಯಾಗಿದ್ದ ಚೆಲುವರಾಯಸ್ವಾಮಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ್ತು ನಟಿ ರಮ್ಯಾ ಗೆಲುವು ಸಾಧಿಸಿದರು. 2018 ರ ಉಪಚುನಾವಣೆಯಲ್ಲಿ ಸಿ.ಎಸ್.ಪುಟ್ಟರಾಜು ರಾಜ್ಯ ವಿಧಾನಸಭೆಗೆ ಆಯ್ಕೆಯಾದ ನಂತರ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಉಳಿಸಿಕೊಂಡಿತು.