ಬೀದರ್ನಲ್ಲಿ ಗೆಲುವು ಪಡೆಯುವುದರೊಂದಿಗೆ ಅತೀ ಚಿಕ್ಕ ವಯಸ್ಸಿನಲ್ಲೇ ಸಂಸತ್ ಮೆಟ್ಟಿಲೇರುವ ಸೌಭಾಗ್ಯ ಪಡೆದುಕೊಂಡಿದ್ದಾರೆ. ಯುವ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ವಿರುದ್ಧ ಖೂಬಾ ಮಂಡಿಯೂರಿದ್ದು, ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಖೂಬಾಗೆ ಭಾರೀ ಹಿನ್ನಡೆಯಾಗಿದೆ. ಬೆಳಗ್ಗೆ ಮತದಾನ ಎಣಿಕೆ ಆರಂಭವಾದ ಸಮಯದಿಂದಲೂ ಬಿಜೆಪಿ ಅಭ್ಯರ್ಥಿ ಖೂಬಾ ಯಾವುದೇ ಸುತ್ತಿನಲ್ಲೂ ಮುನ್ನಡೆಯನ್ನು ಪಡೆದುಕೊಂಡಿರಲಿಲ್ಲ.
ಬೀದರ್ ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ನೂತನವಾಗಿ ಆಯ್ಕೆಯಾದ ಲೋಕಸಭಾ ಸದಸ್ಯ ಸಾಗರ ಖಂಡ್ರೆ, ಬೀದರ್ ಲೋಕಸಭಾ ಕ್ಷೇತ್ರದ ಮತದಾರರು ಹೆಚ್ಚಿನ ಮತದಾನದಿಂದ ಗೆಲ್ಲಿಸಿದ್ದಾರೆ. ಮತದಾರರು ಆಶೀರ್ವಾದ ಮಾಡಿದ್ದಾರೆ. ಪ್ರಚಂಡ ಬಹುಮತದಿಂದ ಗೆಲುವು ಸಾಧಿಸಿದ್ದೇನೆ. ಜನರ ನಿರೀಕ್ಷೆ ತಕ್ಕಂತೆ ಕೆಲಸ ಮಾಡುತ್ತೇನೆ. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಶ್ರಮದ ಫಲದಿಂದ ಗೆದ್ದಿದ್ದೇನೆ. ಈಗ ನನ್ನ ಜವಾಬ್ದಾರಿ ಹೆಚ್ಚಿಸಿದೆ, ಈಗ ತುಂಬಾ ಖುಷಿಯಾಗಿದೆ. ಒಳ್ಳೆಯ ರೀತಿಯ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.