INDIA ಒಕ್ಕೂಟ ಪ್ರತಿಪಕ್ಷ ಸ್ಥಾನದಲ್ಲಿ ಕುಳಿತು ಸರಕಾರದ ನಡೆಯನ್ನು ಪ್ರಶ್ನಿಸುತ್ತೇವೆ:- ಮಹತ್ವ ಸುಳಿವು ನೀಡಿದ ಖರ್ಗೆ ನೇತೃತ್ವದ ತಂಡ
ನರೇಂದ್ರ ಮೋದಿ ನೇತೃತ್ವದ ಬಿಜೆಪಿಯ ಸರ್ವಾಧಿಕಾರ ಆಡಳಿತದ ವಿರುದ್ಧ ನಮ್ಮ ಐಎನ್‌ಡಿಐಎ ಒಕ್ಕೂಟದ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಇಂದಿನ ರಾಜಕೀಯ ಸ್ಥಿತಿಗತಿ ಮತ್ತು ಅಂಕಿ ಅಂಶಗಳ ಬಗ್ಗೆ ಸುಮಾರು ಎರಡು ಗಂಟೆಗಳ ಕಾಲ ನಾವೆಲ್ಲರೂ ಸುದೀರ್ಘವಾಗಿ ಚರ್ಚೆ ನಡೆಸಿದ್ದೇವೆ. ನಾವೆಲ್ಲರೂ ಒಂದಾಗಿ ಒಂದು ನಿರ್ಣಾಯವನ್ನುತೆಗೆದುಕೊಳ್ಳಲಾಗಿದೆ. ನಮ್ಮ ಮೈತ್ರಿಕೂಟಕ್ಕೆ ಬೆಂಬಲ ನೀಡಿದ ದೇಶದ ಜನರಿಗೆ ಎಲ್ಲರ ಪರವಾಗಿ ನಾನು ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಬಿಜೆಪಿಯ ದ್ವೇಷದ, ಬೆಲೆ ಏರಿಕೆಯ ಮತ್ತು ಭ್ರಷ್ಟಾಚಾರದ ರಾಜಕಾರಣಕ್ಕೆ ದೇಶದ ಜನತೆ ತಕ್ಕ ಉತ್ತರ ನೀಡಿದ್ದಾರೆ. ಹಣದುಬ್ಬರ, ನಿರುದ್ಯೋಗ, ಬಂಡವಾಳ ಕ್ರೋಢೀಕರಣ, ಸಂವಿಧಾನ ರಕ್ಷಿಸಲು ಹಾಗೂ ಪ್ರಜಾಪ್ರಭುತ್ವ ರಕ್ಷಣೆಗಾಗಿ ನಮ್ಮ ಹೋರಾಟ ಮುಂದುವರಿಯಲಿದೆ. ನರೇಂದ್ರ ಮೋದಿ ನೇತೃತ್ವದ ಬಿಜೆಪಿಯ ಸರ್ವಾಧಿಕಾರ ಆಡಳಿತದ ವಿರುದ್ಧ ನಮ್ಮ ಐಎನ್‌ಡಿಐಎ ಒಕ್ಕೂಟದ ಹೋರಾಟ ಮುಂದುವರಿಯಲಿದೆ ಎಂದು ಹೇಳಿಕೆ ನೀಡಿದ್ದಾರೆ.
ಜನರು ನಿರ್ಧಾರ ಪ್ರಕಟವಾಗಿದೆ:
ಭವಿಷ್ಯದಲ್ಲಿ ಬಿಜೆಪಿ ಆಡಳಿತ ನಡೆಸಬಾರದು ಎಂದು ಜನತೆ ನಿರ್ಧರಿಸಿದ್ದಾರೆ. ಜನರು ನಿರ್ಧಾರ ಪ್ರಕಟಿಸಿದ್ದಾರೆ ಈ ಎಲ್ಲಾ ವಿಷಯ ಗಮನದಲ್ಲಿಟ್ಟುಕೊಂಡು ಜನರ ಆಶೋತ್ತರಗಳನ್ನು ಈಡೇರಿಸಲು ಸೂಕ್ತ ಕ್ರಮಕೈಗೊಳ್ಳುತ್ತೇವೆ. ಇದು ನಮ್ಮ ನಿರ್ಧಾರವಾಗಿದ್ದು, ನಾವು ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಕಾಂಗ್ರೇಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಭರವಸೆಯ ಮಾತುಗಳನ್ನಾಡಿದರು. ಆದರೆ ಇವುಗಳ ಬಗ್ಗೆ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.