ಬೆಂಗಳೂರು: ಕಳೆದ ಹತ್ತು ದಿನಗಳಿಂದ ವಾಲ್ಮೀಕಿ ನಿಗಮ ಅಕ್ರಮದ ಬಗ್ಗೆ ಮಾಧ್ಯಮಗಳಲ್ಲಿ ಚರ್ಚೆ ಆಗುತ್ತಿದೆ. ವಿಪಕ್ಷದವರು ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ನಿಗಮದ ಅಧಿಕಾರಿ ಕೂಡ ನನ್ನ ಹೆಸರನ್ನು ಎಲ್ಲೂ ಪ್ರಸ್ತಾಪ ಮಾಡಿಲ್ಲ. ನನಗೆ ಯಾರ ಒತ್ತಡಜಕ್ಕೂ ಮಣಿದಿಲ್ಲ, ನಿಸ್ಪಕ್ಷಪಾತವಾಗಿ ತನಿಖೆ ನಡೆಯಲು ಸಚಿವ ಸ್ಥಾನಕ್ಕೆ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡುತ್ತಿದ್ದೇನೆ. ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರ ತರುವುದು ಬೇಡ ಎಂದು ಈ ನಿರ್ಧಾರ ಕೈಗೊಂಡಿರುವುದಾಗಿ ಸಚಿವ ಬಿ.ನಾಗೇಂದ್ರ ಹೇಳಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜೀನಾಮೆ ನೀಡುವುದು ನನ್ನ ಸ್ವ ನಿರ್ಧಾರವಾಗಿದೆ. ರಾಜೀನಾಮೆ ನೀಡಲು ಯಾರೂ ಒತ್ತಡ ಹಾಕಿಲ್ಲ. ಆತ್ಮ ಸಾಕ್ಷಿಯಾಗಿ ರಾಜೀನಾಮೆ ನೀಡುತ್ತಿದ್ದೇನೆ. ಇದಕ್ಕಾಗಿ ಸಿಎಂ ಬಳಿ ಸಮಯ ಕೇಳಿದ್ದೇನೆ. 7.30ಕ್ಕೆ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ. ಈ ಬಗ್ಗೆ ನಾನು ಸಿಎಂ, ಡಿಸಿಎಂ ಹಾಗೂ ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ. ಪ್ರಕರಣದಲ್ಲಿ ತನಿಖೆ ನಡೆದು ಸತ್ಯಾಂಶ ಜನರಿಗೆ ತಿಳಿಯಲಿದೆ ಎಂದು ತಿಳಿಸಿದ್ದಾರೆ. ರಾಜ್ಯಪಾಲರಿಗೆ ಗುರುವಾರ ಬೆಳಗ್ಗೆ ಮನವಿ ಪತ್ರಸಲ್ಲಿಸಿದ್ದರು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಸಿಬಿಐ ತನಿಖೆ ಬಿಸಿ ತಟ್ಟುವ ಮುನ್ನ ನಾಗೇಂದ್ರ ರಾಜಿನಾಮೆ ಪಡೆಯುವುದು ಸೂಕ್ತ ಎನ್ನುವ ಅಭಿಪ್ರಾಯ ವ್ಯಕ್ತವಾಗಿತ್ತು. ಹೀಗಾಗಿ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ವಹಿಸಿದೆ. ಡಿ ಕೆ ಶಿವಕುಮಾರ್ ಅವರೇ ರಾಜೀನಾಮೆ ನೀಡುತ್ತಾರೆ ಆದರೆ ಪತ್ರಿಕಾಗೋಷ್ಠಿಯಲ್ಲಿ ಕೆಲವೊಂದು ವಿಚಾರಗಳನ್ನು ಮುಂದಿಡಲಿದ್ದಾರೆ ಎಂದು ತಿಳಿಸಿದ್ದಾರೆ. ಇವುಗಳ ಮಧ್ಯೆ ಸಿ ಎಂ ಜತೆ ಕೆಲ ಕಾಲ ಚರ್ಚೆ ನಡೆಸಿ ತಾನೇ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ತನಿಖೆ ನಡೆಸುತ್ತಿರುವಂತ ಎಸ್‌ಐಟಿ ಅಧಿಕಾರಿಗಳು ಎಂ ಡಿ ಸೇರಿದಂತೆ ಹಲವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಸತ್ಯ ಇನ್ನಷ್ಟು ತಿಳಿಯಬೇಕಾಗಿದೆ.