ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಡಾ. ಧನಂಜಯ ಸರ್ಜಿ ಪ್ರಚಂಡ ಬಹುಮತಗಳಿಂದ ಗೆಲುವು
ಬಿಜೆಪಿಯ ಧನಂಜಯ ಸರ್ಜಿಗೆ 37,627 ಮತಗಳು ಲಭ್ಯವಾಗಿವೆ. ಕಾಂಗ್ರೆಸ್‌ನ ಆಯನೂರು ಮಂಜುನಾಥ್‌ಗೆ 13,516 ಮತಗಳು ಲಭ್ಯವಾಗಿವೆ. ಕಾಂಗ್ರೆಸ್ ವಿರುದ್ಧ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿಗೆ 24,111 ಮತಗಳ ಅಂತರದ ಭರ್ಜರಿ ಗೆಲುವು ಪ್ರಾಪ್ತವಾಗಿವೆ. ಈ ಮೂಲಕ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಸತತ ಏಳನೇ ಬಾರಿ ಬಿಜೆಪಿ ಗೆಲುವಿನ ನಗೆ ಬೀರಿದೆ.ವಿಧಾನ ಪರಿಷತ್‌ಗೆ ನೈರುತ್ಯ ಪದವೀಧರ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ ಬಿಜೆಪಿ (BJP) ಅಭ್ಯರ್ಥಿ ಡಾ. ಧನಂಜಯ ಸರ್ಜಿಗೆ ಭರ್ಜರಿ ಗೆಲುವು ದೊರೆತಿದೆ. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್‌ಗೆ ಹೀನಾಯ ಸೋಲಾಗಿದೆ. ಬಿಜೆಪಿಯಿಂದ ಬಂಡಾಯ ಎದ್ದು ಸ್ಪರ್ಧಿಸಿದ್ದ ಮಾಜಿ ಶಾಸಕ ರಘುಪತಿ ಭಟ್ ಅವರ ಉಮೇದುವಾರಿಕೆ ವಿಫಲವಾಗಿದೆ.
ಬಿಜೆಪಿಯ ಧನಂಜಯ ಸರ್ಜಿಗೆ 37,627 ಮತಗಳು ಲಭ್ಯವಾಗಿವೆ. ಕಾಂಗ್ರೆಸ್‌ನ ಆಯನೂರು ಮಂಜುನಾಥ್‌ಗೆ 13,516 ಮತಗಳು ಲಭ್ಯವಾಗಿವೆ. ಕಾಂಗ್ರೆಸ್ ವಿರುದ್ಧ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿಗೆ 24,111 ಮತಗಳ ಅಂತರದ ಭರ್ಜರಿ ಗೆಲುವು ಪ್ರಾಪ್ತವಾಗಿವೆ. ಈ ಮೂಲಕ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಸತತ ಏಳನೇ ಬಾರಿ ಬಿಜೆಪಿ ಗೆಲುವಿನ ನಗೆ ಬೀರಿದೆ.
ಚಲಾವಣೆಯಾಗಿದ್ದ ಒಟ್ಟು ಮತಗಳು 66497. ಈ ಪೈಕಿ ಸಿಂಧುವಾದ ಮತಗಳು 61382. ಕುಲಗೆಟ್ಟ ಮತಗಳು 5115. ಗೆಲುವಿಗಾಗಿ ನಿಗದಿಪಡಿಸಿದ್ದ ಕೋಟಾ ಮತಗಳು 30,692. ನಿಗದಿಪಡಿಸಿದ್ದ ಕೋಟಾ ಮತಗಳಿಗಿಂತ ಹೆಚ್ಚಿನ ಪ್ರಮಾಣದ ಮೊದಲ ಪ್ರಾಶಸ್ತ್ಯ ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ ಬಿಜೆಪಿಯ ಧನಂಜಯ ಸರ್ಜಿ.
ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್‌ಗೆ 7,039 ಮತಗಳು ಲಭ್ಯವಾಗಿವೆ. ಇವರ ಪರವಾಗಿ ಶಿವಮೊಗ್ಗದಿಂದ ಮಾಜಿ ಸಚಿವ ಈಶ್ವರಪ್ಪ ಕೂಡ ಬಂದು ಮತ ಯಾಚಿಸಿದ್ದರು. ಆದರೆ ಬಿಜೆಪಿ ಮತ ಗಳಿಕೆಯಲ್ಲಿ ಯಾವುದೇ ಕನ್ನ ಕೊರೆಯಲು ಇವರು ವಿಫಲರಾಗಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಇವರಿಗೆ ಪಕ್ಷ ಟಿಕೆಟ್ ನೀಡಿರಲಿಲ್ಲ. ವಿಧಾನ ಪರಿಷತ್ತಿಗೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ರಘುಪತಿ ಭಟ್‌ಗೆ ಅದೂ ಸಿಕ್ಕಿರಲಿಲ್ಲ. ಇದೀಗ ಬಂಡಾಯವೂ ವಿಫಲವಾಗಿದೆ. ಹಿಜಾಬ್ ಮುಂತಾದ ಪ್ರಕರಣಗಳಲ್ಲಿ ಆಕ್ರಮಣಕಾರಿ ನಿಲುವು ತಾಳಿದ್ದ ರಘುಪತಿ ಭಟ್ ಅವರ ಈ ತೀವ್ರ ನಿಲುವೇ ಅವರನ್ನು ಬಿಜೆಪಿ ಕೈಬಿಡಲು ಕಾರಣವಾಯಿತಾ ಎಂಬ ಮಾತು ಇದೀಗ ಕೇಳಿ ಬರುತ್ತಿದೆ.