2024-25 ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಭೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಂತೆ ಆದೇಶ ಹೊರಡಿಸಲಾಗಿದೆ. 
ಒಟ್ಟು 35000 ಶಿಕ್ಷಕರ ನೇಮಕಾತಿ ಆದೇಶ ನೀಡಿದ್ದು ಇದರಲ್ಲಿ ದಕ್ಷಿಣ ಕನ್ನಡಕ್ಕೆ 1033 ಹುದ್ದೆಗಳು ನೀಡಲಾಗಿದೆ. ಮುಖ್ಯವಾಗಿ ಷರತ್ತುಗಳ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳುವಂತೆ ತಾಲೂಕು / ಜಿಲ್ಲಾವಾರು ಹಂಚಿಕೆ ಮಾಡಿದ ವಿವರಗಳಲ್ಲಿ ಅನುಬಂಧ ಅಡಕಗೊಳಿಸಲಾಗಿದೆ. 
ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕು ಅನ್ವಯವಾಗಿ ಹುದ್ದೆಯ ವಿವರ ಈ ಕೆಳಗೆ ನೀಡಲಾಗಿದೆ.
























