ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಂಯೋಜಕರು ಕಾವು ಹೇಮನಾಥ್ ಶೆಟ್ಟಿ ಯವರು ಎರಡನೇ ಬಾರಿಗೆ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಐವಾನ್ ಡಿಸೋಜಾ ರನ್ನು ಅವರ ಗೃಹ ಕಛೇರಿಯಲ್ಲಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಪೂಡಾ ಸದಸ್ಯ ಲ್ಯಾನ್ಸಿ ಮಸ್ಕರೇನಸ್, ಎನ್ ಎಸ್ ಯು ಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬೆ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ ಬನ್ನೂರು, ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ಪುರಸಭೆ ಮಾಜಿ ಸದಸ್ಯ ಇಸಾಕ್ ಸಾಲ್ಮರ , ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಶೀರ್ ಪರ್ಲಡ್ಕ ಉಪಸ್ಥಿತರಿದ್ದರು.