ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬೆಂಗಳೂರಿನ ಸದಾಶಿವನಗರದ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಪ್ರಕರಣ ದಾಖಲಿಸಿದ್ದರು. ಆ ಮಹಿಳೆಯು ಮೇ 26ರಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಈಗ ಸಂತ್ರಸ್ತೆಯ ಸೋದರ ಕಾನೂನು ಹೋರಾಟ ನಡೆಸುತ್ತಿದ್ದಾರೆ. ಪೋಕ್ಸ್ ಕೇಸ್ ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಬಂಧನದ ಭೀತಿ ಎದುರಾಗಿದೆ. ಬೆಂಗಳೂರಿನ 1ನೇ ತ್ವರಿತ ನ್ಯಾಯಾಲಯವು ಇಂದು ಅವರ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಜಾರಿಗೊಳಿಸಿದೆ.
ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದಂತ ಪೋಕ್ಸೋ ಕೇಸಲ್ಲಿ ಸಿಐಡಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು ಸಹ ವಿಚಾರಣೆಗೆ ಹಾಜರಾಗದ ಕಾರಣ ಜೊತೆಗೆ ಕೇಸ್ ನೀಡಿದ ಪೀರ್ಯಾಧಿರರಿಗೆ ಹಣ ನೀಡಿ ಕೇಸ್ ಹಿಂಪಡೆಯುವಂತೆ ಕಾಣದ ಕೈಗಳಿಂದ ಕೆಲಸ ನಡೆಸಿದ್ದರು. ಇನ್ನು ವಿಚಾರಣೆಗೆ ಕಾಲಾವಕಾಶ ಕೋರಿ ಸಿಐಡಿಗೆ ಬಿಎಸ್ ವೈ ಪತ್ರ ಬರೆದಿದ್ದರು. ಜೂನ್ 17 ನೇ ತಾರೀಖು ವಿಚಾರಣೆಗೆ ಹಾಜರಾಗುವುದಾಗಿ ಪತ್ರದಲ್ಲಿ ತಿಳಿಸಿದ್ದರು.
ಈ ಎಲ್ಲಾ ವಿಚಾರದ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಸಿಐಡಿ ಪೊಲೀಸರು ಪೋಕ್ಸೋ ಕೇಸ್ ನಲ್ಲಿ ಅಗತ್ಯ ಬಿದ್ದರೇ ಯಾವುದೇ ಸಂದರ್ಭದಲ್ಲಿ ಬಂಧಿಸಬಹುದು ಅಂತ ತಿಳಿಸಿದ್ದರು. ಈ ಬೆನ್ನಲ್ಲೇ ಕೋರ್ಟ್ ನಿಂದ ಯಡಿಯೂರಪ್ಪಗೆ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಲಾಗಿದೆ. ಯಡಿಯೂರಪ್ಪ ರಾಜ್ಯದಲ್ಲಿ ಇಲ್ಲದ ಕಾರಣ ನಾಳೆ ವಿಚಾರಣೆಗೆಗೆ ಹಾಜರಾಗುತ್ತಾರೆ ಎಂಬುದಾಗಿಯೂ ಮಾಹಿತಿ ದೊರೆತಿದೆ.