ಕಲಬುರಗಿ: ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಆರು ಗೋವುಗಳ ರಕ್ಷಣೆ ಮಾಡಲು ಮುಂದಾದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ಹಲ್ಲೆ ನಡೆದ ಪ್ರಕರಣ ಗುರುವಾರ ರಾತ್ರಿ ನಡೆದಿದೆ. ಗೋವುಗಳನ್ನು ಸಾಗಿಸುತ್ತಿದ್ದನ್ನು ತಡೆದಿದ್ದಕ್ಕೆ 30ರಿಂದ 35 ಮುಸ್ಲಿಂ ಯುವಕರು ಹಿಂದೂ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ ಮಾಡಿ ಗಾಯಗೊಳಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕಲಬುರಗಿ ನಗರದ ಖಾದ್ರಿ ಚೌಕ್ ಬಳಿ ಘಟನೆ. ನಡೆದಿದ್ದು, ರಾಮ ಸೇನೆ ಕಾರ್ಯಕರ್ತರು ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಕಲ್ಲು ತೂರಾಟ ನಡೆದಿದೆ ಎಂಬುದಾಗಿ ದೂರಿನಲ್ಲಿ ದಾಖಲಾಗಿದೆ.
ಬಕ್ರಿದ್ ಹಬ್ಬದ ಹಿನ್ನಲೆಯಲ್ಲಿ ಖಾದ್ರಿ ಚೌಕ್ ಬಳಿ ಕಸಾಯಿ ಖಾನೆಗೆ ಗೋವುಗಳನ್ನು ಸಾಗಿಸುತ್ತಿದ್ದರು. ಆಳಂದ ಕಾಲೋನಿ ಬಳಿ ಒಂದು ಟಂ ಟಂ ಹಾಗೂ ಪಿಕ್ ವಾಹನದ ಮೂಲಕ ಸಾಗಿಸಲಾಗುತ್ತಿದ್ದ ಗೋವುಗಳನ್ನು ಹಿಂದೂಪರ ಸಂಘಟನೆ ಕಾರ್ಯಕರ್ತರು ತಡೆದಿದ್ದಾರೆ.
ಈ ವೇಳೆ ಅವರ ಮೇಲೆ ಕಲ್ಲುಗಳನ್ನು ತೂರಿದ್ದಾರೆ. ಘಟನೆಯಲ್ಲಿ ರಮೇಶ್ ದೇಸಾಯಿ, ಹಾಗೂ ಮಹಾದೇವ್ ಎನ್ನುವರಿಗೆ ಗಾಯವಾಗಿದೆ. ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ. ನೀಡಲಾಗುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಚೌಕ್ ಪೊಲೀಸ್ ಠಾಣಾವ್ಯಾಪ್ತಿ ಪ್ರಕರಣ ದಾಖಲಾಗಿದೆ.