ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರ ಬಂದ ನಂತರ ಹಿಂದುಗಳ ಮೇಲೆ ದೌರ್ಜನ್ಯ ನಡೆಯುತ್ತಲೇ ಇದೆ. ಬೆಳ್ತಂಗಡಿಯಲ್ಲಿ ದ್ವೇಷದ ರಾಜಕೀಯ ನಡೆಯುತ್ತಿದೆ ಇದಕ್ಕೆ ಉತ್ತರವಾಗಿ ಬೃಹತ್ ಪ್ರತಿಭಟನೆ ನಡೆಯಲಿದೆ.
ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯ, ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಜೂನ್ 18 ರಂದು ಬೆಳಗ್ಗೆ 10.00 ಗಂಟೆಗೆ ಸಂತೆಕಟ್ಟೆ ಅಯ್ಯಪ್ಪ ಗುಡಿಯಿಂದ ತಾಲೂಕು ಆಡಳಿತ ಸೌಧದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬಿಜೆಪಿ ಬೆಳ್ತಂಗಡಿ ಮಂಡಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.