ಕರ್ನಾಟಕ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಮುಗಿಸಿದ ಸಂಧರ್ಭ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ದರವನ್ನು ಹೆಚ್ಚಳ ಮಾಡುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ಆದೇಶ ಪ್ರಕಟಿಸಿದೆ.
ತೆರಿಗೆ ದರ ಹೆಚ್ಚಳದ ಕಾರಣ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳವಾಗುವ ಸಾಧ್ಯತೆ ಇದೆ. ಸುದೀರ್ಘ ಸಮಯದ ನಂತರ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದುಬಾರಿಯಾಗಿದೆ.
ಈ ಹಿಂದೆ ಬಿಜೆಪಿ ಸರಕಾರದ ಸಂಧರ್ಭದಲ್ಲಿ ಪೆಟ್ರೋಲ್ ಡಿಸೇಲ್ ದರ ಇಳಿಸಿತ್ತದಾರು ಆಗ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಶೇ 25.92 ರಷ್ಟಿತ್ತು. ಈಗ ಶೇ 3.9ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 29.84 ಕ್ಕೆ ಏರಿಕೆಯಾಗಿದೆ. ಅದರಂತೆ ಡಿಸೇಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಈ ಹಿಂದೆ ಶೇ 14.34 ರಷ್ಟಿತ್ತು. ಈಗ ಶೇ 4.1 ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 18.44 ಕ್ಕೆ ಏರಿಕೆಯಾಗಿದೆ. ಪರಿಣಾಮವಾಗಿ ರಾಜ್ಯದಲ್ಲಿ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡಿಸೇಲ್ ದರ 3.50 ರೂಪಾಯಿ ತಕ್ಷಣ ಹೆಚ್ಚು ಮಾಡುವಂತೆ ಸರಕಾರ ಆದೇಶ ಹೊರಡಿಸಿದೆ