ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಸಾಮಾನ್ಯ ಜನರ ಬದುಕಿಗೆ ಬರೆ ಎಳೆದಿರುವುದನ್ನು ಖಂಡಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾತಾನಾಡಿದರು.
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡಿರುವ ಕಾಂಗ್ರೆಸ್ ಸರ್ಕಾರ ಅವೈಜ್ಞಾನಿಕ ಗ್ಯಾರೆಂಟಿ ಯೋಜನೆಗಳಿಗೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹಣ ಸರಿದೂಗಿಸಲು ಯತ್ನಿಸುತ್ತಿರುವುದು ಖಂಡನೀಯ, ಜನಸಾಮಾನ್ಯರ ಹಿತದೃಷ್ಟಿಯಿಂದ ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಇಳಿಕೆ ಮಾಡಬೇಕು, ಕಾಂಗ್ರೆಸ್ ಸರಕಾರ ಗ್ಯಾರಂಟಿಗಾಗಿ ಬೆಲೆ ಏರಿಕೆಯನ್ನು ಆರಂಭಿಸಿದೆ ಎಂದು ಲೇವಡಿ ಮಾಡಿದರು.
ವಿನೂತನವಾಗಿ ಪ್ರತಿಭಟನೆ ನಡೆಸಿ ಕಾರೊಂದಕ್ಕೆ ಹಗ್ಗಕಟ್ಟಿ ಎಳೆದುಕೊಂಡು ಗೆರಟೆ, ತಂಬಿಗೆ ಹಿಡಿದುಕೊಂಡು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ದ ಕ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ,ಪ್ರಧಾನ ಕಾರ್ಯದರ್ಶಿ ಕಿಶೋರ್ ಬೊಟ್ಯಾಡಿ,ಶಾಸಕ ವೇದವ್ಯಾಸ್ ಕಾಮತ್,