ವಿದ್ಯುತ್ ತಗುಲಿ ಯುವಕ ಸಾವನ್ನಪ್ಪಿದ ಘಟನೆ ಅಲೆಕ್ಕಾಡಿಯಲ್ಲಿ ನಡೆದಿದೆ.
ದ.ಕ. ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದ್ದು ಬೆಳ್ತಂಗಡಿಯ ಮೊಗ್ರು ಸಮೀಪದ ನಡು ಎರ್ಮಲ್ ನ ಪ್ರಕಾಶ್(29) ಸಾವನ್ನಪ್ಪಿದ್ದು
ಪಂಜದ ಅಲೆಕ್ಕಾಡಿ ಸಮೀಪದ ಪಿಜಾವ್ ನಲ್ಲಿ ವಿದ್ಯುತ್ ಕಂಬ ಏರಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಯುವಕ ಗುತ್ತಿಗೆದಾರರ ಅಡಿಯಲ್ಲಿ ವಿದ್ಯುತ್ ಸರಿಪಡಿಸುತ್ತಿದ್ದ ಈ ವೇಳೆ ಪ್ರಕಾಶ್ ಗೆ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸುಳ್ಯ ತಾಲೂಕಿನ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.