• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜನರಿಗೆ ತೊಂದರೆಯಾಗದಂತೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಿ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಸೂಚನೆ

ಜನರಿಗೆ ತೊಂದರೆಯಾಗದಂತೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಿ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಸೂಚನೆ

June 20, 2024
ಪುತ್ತೂರಿನ ಒಡಿಯೂರು ಸಹಕಾರಿ ಸಂಘಕ್ಕೆ ವಂಚಿಸಿದ ಪ್ರಕರಣ :ಬೆಳಂದೂರಿನ ಅಬ್ದುಲ್ ರಮೀಝ್ ನಿಂದ ಬೆಳ್ತಂಗಡಿಯ ಸಹಕಾರಿ ಸಂಘಕ್ಕೂ ವಂಚನೆ-ದೂರು ದಾಖಲು

ಪುತ್ತೂರಿನ ಒಡಿಯೂರು ಸಹಕಾರಿ ಸಂಘಕ್ಕೆ ವಂಚಿಸಿದ ಪ್ರಕರಣ :ಬೆಳಂದೂರಿನ ಅಬ್ದುಲ್ ರಮೀಝ್ ನಿಂದ ಬೆಳ್ತಂಗಡಿಯ ಸಹಕಾರಿ ಸಂಘಕ್ಕೂ ವಂಚನೆ-ದೂರು ದಾಖಲು

October 17, 2025

ನಾಳೆ (ಅ.18): ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಶುದ್ಧ ಎಳ್ಳೆಣ್ಣೆ ಅಭಿಷೇಕ

October 17, 2025
ಪುತ್ತೂರು ಮಾರ್ಕೆಟ್ ಪರಿಸರ ಹಾಳಾಗಿಸಿದ ಚರಂಡಿ ಬ್ಲಾಕ್ : ರಸ್ತೆಯಲ್ಲಿ ದುರ್ವಾಸನೆಯ ಕಾಟ ಅನಾರೋಗ್ಯ ಬೀರುವ ಮೊದಲು ಎಚ್ಚರ

ಪುತ್ತೂರು ಮಾರ್ಕೆಟ್ ಪರಿಸರ ಹಾಳಾಗಿಸಿದ ಚರಂಡಿ ಬ್ಲಾಕ್ : ರಸ್ತೆಯಲ್ಲಿ ದುರ್ವಾಸನೆಯ ಕಾಟ ಅನಾರೋಗ್ಯ ಬೀರುವ ಮೊದಲು ಎಚ್ಚರ

October 17, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು 22ನೇ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ : ಟ್ರಸ್ಟ್ ನ ಸಮಾಜಮುಖಿ ಕೆಲಸ ಕಾರ್ಯಗಳು ಶ್ಲಾಘನೀಯ ಡಾ. ಸೀತಾರಾಮ್ ಭಟ್

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು 22ನೇ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ : ಟ್ರಸ್ಟ್ ನ ಸಮಾಜಮುಖಿ ಕೆಲಸ ಕಾರ್ಯಗಳು ಶ್ಲಾಘನೀಯ ಡಾ. ಸೀತಾರಾಮ್ ಭಟ್

October 17, 2025
ಪಾಣಾಜೆ ಗ್ರಾಮದ ಬೊಳ್ಳಿಂಬಳ ನಿವಾಸಿಯಾದ ಸೀತಾರಾಮ‌ ರೈ ಯವರ ವೈದ್ಯಕೀಯ ಚಿಕಿತ್ಸೆಗಾಗಿ  ಪುತ್ತಿಲಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು ಇದರ  ವತಿಯಿಂದ ಸಹಾಯಧನ

ಪಾಣಾಜೆ ಗ್ರಾಮದ ಬೊಳ್ಳಿಂಬಳ ನಿವಾಸಿಯಾದ ಸೀತಾರಾಮ‌ ರೈ ಯವರ ವೈದ್ಯಕೀಯ ಚಿಕಿತ್ಸೆಗಾಗಿ ಪುತ್ತಿಲಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು ಇದರ ವತಿಯಿಂದ ಸಹಾಯಧನ

October 17, 2025
ಕೇರಳ ವಿದ್ಯುತ್​​ ಲೈನ್: ರೈತರಿಂದ ತೀವ್ರ ವಿರೋಧ, ಹೋರಾಟಕ್ಕೆ ಹಿಂದೂ ಸಂಘಟನೆಗಳ ಸಾಥ್

ಕೇರಳ ವಿದ್ಯುತ್​​ ಲೈನ್: ರೈತರಿಂದ ತೀವ್ರ ವಿರೋಧ, ಹೋರಾಟಕ್ಕೆ ಹಿಂದೂ ಸಂಘಟನೆಗಳ ಸಾಥ್

October 17, 2025
ಬೆಳ್ತಂಗಡಿ ಹುಣಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು ಕೊಯ್ಯೂರು  ಸರ್ಕಾರಿ ಬಸ್ ಸಂಚಾರ ಪ್ರಾರಂಭ

ಬೆಳ್ತಂಗಡಿ ಹುಣಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

October 17, 2025
ಸಾರಿಗೆ ಇಲಾಖೆ ಹೆಚ್.ಎಸ್.ಆರ್.ಪಿ (HSRP) ನಂಬರ್ ಪ್ಲೇಟ್ ಅಳವಡಿಕೆ ಮಾಡಲು  ನವೆಂಬರ್ 17ರ ವರೆಗೆ ಕಾಲಾವಕಾಶ

ಸಾರಿಗೆ ಇಲಾಖೆ ಹೆಚ್.ಎಸ್.ಆರ್.ಪಿ (HSRP) ನಂಬರ್ ಪ್ಲೇಟ್ ಅಳವಡಿಕೆ ಮಾಡಲು ನವೆಂಬರ್ 17ರ ವರೆಗೆ ಕಾಲಾವಕಾಶ

October 17, 2025
ನಿತಿನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸರಿಗಮಪ ಖ್ಯಾತಿಯ ಸುಹಾನಾ ಸೈಯದ್

ನಿತಿನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸರಿಗಮಪ ಖ್ಯಾತಿಯ ಸುಹಾನಾ ಸೈಯದ್

October 17, 2025
ಮನೆ ಕಟ್ಟುವವರಿಗೆ ಕೆಂಪು ಕಲ್ಲು ಸಮಸ್ಯೆ, ರಾಜಸ್ವ ಕಡಿತಗೊಂಡರೂ ಇಳಿಕೆಯಾಗದ ದರ

ಮನೆ ಕಟ್ಟುವವರಿಗೆ ಕೆಂಪು ಕಲ್ಲು ಸಮಸ್ಯೆ, ರಾಜಸ್ವ ಕಡಿತಗೊಂಡರೂ ಇಳಿಕೆಯಾಗದ ದರ

October 17, 2025
ಪಾಕಿಸ್ತಾನದ ಮಿಲಿಟರಿಯ ಸುಳ್ಳು, ಕಪಟ ಜಗತ್ತಿನ ಮುಂದೆ ಮತ್ತೊಮ್ಮೆ ಬಹಿರಂಗ

ಪಾಕಿಸ್ತಾನದ ಮಿಲಿಟರಿಯ ಸುಳ್ಳು, ಕಪಟ ಜಗತ್ತಿನ ಮುಂದೆ ಮತ್ತೊಮ್ಮೆ ಬಹಿರಂಗ

October 17, 2025
ಕಲ್ಲೇರಿಯಲ್ಲಿ  ಕೌಶಲ್ಯ ಅಭಿವೃದ್ಧಿ ಉಚಿತ  ಸ್ವ ಉದ್ಯೋಗ ತರಬೇತಿಯ ಸಮಾರೋಪ

ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

October 17, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 17, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ನಾಳೆ (ಅ.18): ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಶುದ್ಧ ಎಳ್ಳೆಣ್ಣೆ ಅಭಿಷೇಕ

    ಪುತ್ತೂರು ಮಾರ್ಕೆಟ್ ಪರಿಸರ ಹಾಳಾಗಿಸಿದ ಚರಂಡಿ ಬ್ಲಾಕ್ : ರಸ್ತೆಯಲ್ಲಿ ದುರ್ವಾಸನೆಯ ಕಾಟ ಅನಾರೋಗ್ಯ ಬೀರುವ ಮೊದಲು ಎಚ್ಚರ

    ಪುತ್ತೂರು ಮಾರ್ಕೆಟ್ ಪರಿಸರ ಹಾಳಾಗಿಸಿದ ಚರಂಡಿ ಬ್ಲಾಕ್ : ರಸ್ತೆಯಲ್ಲಿ ದುರ್ವಾಸನೆಯ ಕಾಟ ಅನಾರೋಗ್ಯ ಬೀರುವ ಮೊದಲು ಎಚ್ಚರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು 22ನೇ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ : ಟ್ರಸ್ಟ್ ನ ಸಮಾಜಮುಖಿ ಕೆಲಸ ಕಾರ್ಯಗಳು ಶ್ಲಾಘನೀಯ ಡಾ. ಸೀತಾರಾಮ್ ಭಟ್

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು 22ನೇ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ : ಟ್ರಸ್ಟ್ ನ ಸಮಾಜಮುಖಿ ಕೆಲಸ ಕಾರ್ಯಗಳು ಶ್ಲಾಘನೀಯ ಡಾ. ಸೀತಾರಾಮ್ ಭಟ್

    ಪಾಣಾಜೆ ಗ್ರಾಮದ ಬೊಳ್ಳಿಂಬಳ ನಿವಾಸಿಯಾದ ಸೀತಾರಾಮ‌ ರೈ ಯವರ ವೈದ್ಯಕೀಯ ಚಿಕಿತ್ಸೆಗಾಗಿ  ಪುತ್ತಿಲಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು ಇದರ  ವತಿಯಿಂದ ಸಹಾಯಧನ

    ಪಾಣಾಜೆ ಗ್ರಾಮದ ಬೊಳ್ಳಿಂಬಳ ನಿವಾಸಿಯಾದ ಸೀತಾರಾಮ‌ ರೈ ಯವರ ವೈದ್ಯಕೀಯ ಚಿಕಿತ್ಸೆಗಾಗಿ ಪುತ್ತಿಲಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು ಇದರ ವತಿಯಿಂದ ಸಹಾಯಧನ

    ಕೇರಳ ವಿದ್ಯುತ್​​ ಲೈನ್: ರೈತರಿಂದ ತೀವ್ರ ವಿರೋಧ, ಹೋರಾಟಕ್ಕೆ ಹಿಂದೂ ಸಂಘಟನೆಗಳ ಸಾಥ್

    ಕೇರಳ ವಿದ್ಯುತ್​​ ಲೈನ್: ರೈತರಿಂದ ತೀವ್ರ ವಿರೋಧ, ಹೋರಾಟಕ್ಕೆ ಹಿಂದೂ ಸಂಘಟನೆಗಳ ಸಾಥ್

    ಬೆಳ್ತಂಗಡಿ ಹುಣಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು ಕೊಯ್ಯೂರು  ಸರ್ಕಾರಿ ಬಸ್ ಸಂಚಾರ ಪ್ರಾರಂಭ

    ಬೆಳ್ತಂಗಡಿ ಹುಣಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

    ಮನೆ ಕಟ್ಟುವವರಿಗೆ ಕೆಂಪು ಕಲ್ಲು ಸಮಸ್ಯೆ, ರಾಜಸ್ವ ಕಡಿತಗೊಂಡರೂ ಇಳಿಕೆಯಾಗದ ದರ

    ಮನೆ ಕಟ್ಟುವವರಿಗೆ ಕೆಂಪು ಕಲ್ಲು ಸಮಸ್ಯೆ, ರಾಜಸ್ವ ಕಡಿತಗೊಂಡರೂ ಇಳಿಕೆಯಾಗದ ದರ

    ಬೆಳ್ತಂಗಡಿ: ಕೊಯ್ಯೂರು ಗ್ರಾಮಗಳ ಪ್ರಯಾಣಿಕರು ಬೇಡಿಕೆಯ ಸರ್ಕಾರಿ ಬಸ್ ಸಂಚಾರ ಪ್ರಾರಂಭ ಬೇಡಿಕೆ ಈಡೇರಿಸಿದ ಶಾಸಕರಾದ ಹರೀಶ್ ಪೂಂಜ

    ಬೆಳ್ತಂಗಡಿ: ಕೊಯ್ಯೂರು ಗ್ರಾಮಗಳ ಪ್ರಯಾಣಿಕರು ಬೇಡಿಕೆಯ ಸರ್ಕಾರಿ ಬಸ್ ಸಂಚಾರ ಪ್ರಾರಂಭ ಬೇಡಿಕೆ ಈಡೇರಿಸಿದ ಶಾಸಕರಾದ ಹರೀಶ್ ಪೂಂಜ

    ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಜನರಿಗೆ ತೊಂದರೆಯಾಗದಂತೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಿ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಸೂಚನೆ

by ಪ್ರಜಾಧ್ವನಿ ನ್ಯೂಸ್
June 20, 2024
in ಮಂಗಳೂರು
0
ಜನರಿಗೆ ತೊಂದರೆಯಾಗದಂತೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಿ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಸೂಚನೆ
28
SHARES
81
VIEWS
ShareShareShare

ಮಂಗಳೂರು:ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟು ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳನ್ನು ಯೋಜನಾ ಬದ್ಧವಾಗಿ ಮತ್ತು ವ್ಯವಸ್ಥಿತವಾಗಿ ನಡೆಸುವಂತೆ ದ.ಕ.ಸಂಸದ ಕ್ಯಾ|ಬ್ರ್ರಿಜೇಶ್ ಚೌಟ ಅವರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.ಜುಲೈ 5ರ ಒಳಗೆ ಮೆಲ್ಕಾರ್, ಕಲ್ಲಡ್ಕ, ಮಾಣಿ ಮತ್ತು ಉಪ್ಪಿನಂಗಡಿ ಜಂಕ್ಷನ್‌ನಲ್ಲಿ ಸುಗಮ ಸಂಚಾರಕ್ಕೆ ಮತ್ತು ಸಾರ್ವಜನಿಕರ ಓಡಾಟಕ್ಕೆ ಇರುವ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಸಂಸದರು ಗಡುವು ನೀಡಿದರು.

ಕೇಂದ್ರ ಸರ್ಕಾರದಿಂದ ಅನುಷ್ಟಾನಗೊಳ್ಳುತ್ತಿರುವ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖಾ ಅಽಕಾರಿಗಳೊಂದಿಗೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಬಿ.ಸಿ.ರೋಡ್-ಅಡ್ಡಹೊಳೆ,ಸಾಣೂರು-ಬಿಕರ್ನಕಟ್ಟೆ,ಪೂಂಜಾಲಕಟ್ಟೆ- ಚಾರ್ಮಾಡಿ ವಿವಿಧ ಮಹತ್ವದ ಹೆದ್ದಾರಿ ಕಾಮಗಾರಿಗಳು ನಡೆಯುತ್ತಿವೆ,ಈ ಯೋಜನೆಗಳು ಪೂರ್ಣಗೊಂಡರೆ ಜಿಲ್ಲೆಯ ಸಂಪರ್ಕ ವ್ಯವಸ್ಥೆಯಲ್ಲಿ ಮಹತ್ವದ ಪ್ರಗತಿ ಆಗಲಿದೆ ಎಂದು ಚೌಟ ಅವರು ಹೇಳಿದರು.

ಬಿ.ಸಿ.ರೋಡ್-ಅಡ್ಡಹೊಳೆ ಹೆದ್ದಾರಿ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಸಂಸದರು, ಕಾಮಗಾರಿಗಳನ್ನು ಅಲ್ಲಲ್ಲಿ ನಡೆಸುವ ಮೊದಲು ವ್ಯವಸ್ಥಿತವಾಗಿ ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ನಡೆಸಬೇಕು.ಸಂಪೂರ್ಣ ಕಾಮಗಾರಿಯನ್ನು ಸಂಘಟಿತವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.

ಬಿ.ಸಿ.ರೋಡ್‌ನಿಂದ ಮಾಣಿವರೆಗಿನ ಹೆದ್ದಾರಿ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಶೈಲಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ಸಾರ್ವಜನಿಕರ ತಾಳ್ಮೆ ಪರೀಕ್ಷಿಸಿ ಕಾಮಗಾರಿ ನಡೆಸುವುದು ಬೇಡ,ಕಳೆದ ಹಲವು ತಿಂಗಳಿಂದ ಬಸ್, ದ್ವಿಚಕ್ರ ವಾಹನದಲ್ಲಿ ಸಂಚರಿಸುವ ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ.ರಾಷ್ಟ್ರೀಯ ಹೆದ್ದಾರಿ ಇಲಾಖೆಯು ತನ್ನ ಸಂಪೂರ್ಣ ಸಾಮರ್ಥ್ಯ, ಮಾನವ ಸಂಪನ್ಮೂಲ ಹಾಗೂ ಯಂತ್ರೋಪಕರಣಗಳನ್ನು ಬಳಸಿಕೊಂಡು ಕಾಮಗಾರಿ ನಿರ್ವಹಿಸಬೇಕು.ಜುಲೈ 5ರ ಒಳಗೆ ಮೆಲ್ಕಾರ್, ಕಲ್ಲಡ್ಕ, ಮಾಣಿ ಮತ್ತು ಉಪ್ಪಿನಂಗಡಿ ಜಂಕ್ಷನ್‌ನಲ್ಲಿ ಸುಗಮ ಸಂಚಾರಕ್ಕೆ ಮತ್ತು ಸಾರ್ವಜನಿಕರ ಓಡಾಟಕ್ಕೆ ಇರುವ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಗಡುವು ನೀಡಿದರು.

ತಲಪಾಡಿ-ಕಾಸರಗೋಡುವರೆಗೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯನ್ನು ಯಾವುದೇ ಸಮಸ್ಯೆಗಳಿಲ್ಲದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನಿರ್ವಹಿಸಿದೆ.ಇದೇ ಮಾದರಿಯನ್ನು ಅನುಸರಿಸಿ ಕಾಮಗಾರಿ ನಡೆಸುವಂತೆ ಅವರು ಸೂಚಿಸಿದರು.ಕಾರ್ಕಳ-ಮೂಡಬಿದ್ರೆ-ಮಂಗಳೂರು ಹೆದ್ದಾರಿಯಲ್ಲಿ ಚತುಷ್ಪಥ ಕಾಮಗಾರಿಯಲ್ಲಿ ಸಮಸ್ಯೆ ಇರುವ ಸ್ಥಳಗಳನ್ನು ಹೊರತುಪಡಿಸಿ ಉಳಿದೆಡೆ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಸಂಸದರು ಸೂಚಿಸಿದರು.ಮೂಡಬಿದ್ರೆ ಬೈಪಾಸ್ ನಿರ್ಮಾಣಕ್ಕೆ ಭೂಸ್ವಾಧಿನಗೊಂಡ ಜಮೀನನ್ನು ಹೆದ್ದಾರಿ ಪ್ರಾಽಕಾರಕ್ಕೆ ಶೀಘ್ರವೇ ಹಸ್ತಾಂತರಿಸಲು ಅಧಿಕಾರಿಗಳಿಗೆ ತಿಳಿಸಿದರು.

ಕೂಳೂರು ಸೇತುವೆ ಕಾಮಗಾರಿ ಹಾಗೂ ಹೊಸ ಸೇತುವೆ ಬಗ್ಗೆ ಸಂಸದರು ಮಾಹಿತಿ ಪಡೆದರು.ಕಾಮಗಾರಿ ಸದ್ಯಕ್ಕೆ ಸ್ಥಗಿತಗೊಂಡಿರುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವೇದ್ ಅಝ್ಮಿ ತಿಳಿಸಿದರು.ಇದೊಂದು ಗಂಭೀರ ವಿಷಯವಾಗಿದ್ದು, ಹೆದ್ದಾರಿ ಪ್ರಾಧಿಕಾರದ ಉನ್ನತ ಅಧಿಕಾರಿಗಳ ಗಮನಕ್ಕೆ ತರಲು ಸಂಸದರು  ಸೂಚಿಸಿದರು.

ಕೊಟ್ಟಾರ ಚೌಕಿ ಸರ್ವಿಸ್ ರಸ್ತೆ, ಕೆಪಿಟಿ ಓವರ್ ಪಾಸ್,ನಂತೂರು ಮೇಲ್ಸೇತುವೆ ಬಗ್ಗೆ ಪರಿಶೀಲನೆ ನಡೆಸಿದ ಅವರು ಈ ಬಗ್ಗೆ ಶೀಘ್ರವೇ ಪ್ರತ್ಯೇಕ ಸಭೆ ಕರೆದು ಎಲ್ಲಾ ಗೊಂದಲವನ್ನು ಬಗೆಹರಿಸಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು. ಕೆಪಿಟಿ ಜಂಕ್ಷನ್ ಕಾಮಗಾರಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಲ್ಲಲ್ಲಿ ಸರ್ವಿಸ್ ರಸ್ತೆ ನಿರ್ಮಿಸಲಾಗಿದೆ.ಆದರೂ ಹಲವು ಕಡೆ ಪ್ರತಿನಿತ್ಯ ಅಪಘಾತಗಳು ಸಂಭವಿಸಿ ಪ್ರಾಣ ಹಾನಿಗಳಾಗುತ್ತಿವೆ ಈ ನಿಟ್ಟಿನಲ್ಲಿ ತಲಪಾಡಿಯಿಂದ ಹೆಜಮಾಡಿವರೆಗೆ ಸಂಪೂರ್ಣವಾಗಿ ವ್ಯವಸ್ಥಿತವಾಗಿ ಸರ್ವೀಸ್ ರಸ್ತೆ ನಿರ್ಮಿಸುವ ಬಗ್ಗೆ ವರದಿ ತಯಾರಿಸಿ ಸಲ್ಲಿಸುವಂತೆ ಎನ್‌ಎಚ್‌ಎಐ ಅಧಿಕಾರಿಗಳಿಗೆ ಸಂಸದರು ಸೂಚಿಸಿದರು.

ಬಿ.ಸಿ.ರೋಡ್‌ನಿಂದ ಸುರತ್ಕಲ್‌ವರೆಗಿನ ಹೆದ್ದಾರಿಯನ್ನು ಪ್ರಸ್ತುತ ಹೆದ್ದಾರಿ ಪ್ರಾಧಿಕಾರವೇ ನಿರ್ವಹಿಸುತ್ತಿದೆ, ಈ ರಸ್ತೆಯ ನಿರ್ವಹಣೆಯ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ಅಸಮಾಧಾನವಿದೆ. ಈ ನಿಟ್ಟಿನಲ್ಲಿ ಇದರ ನಿರ್ವಹಣೆಯನ್ನು ಬೇರೆ ಏಜೆನ್ಸಿಗಳಿಗೆ ನೀಡಲು ಸಾಧ್ಯವಿದೆಯೇ ಎಂಬುದರ ಬಗ್ಗೆ ಪರಿಶೀಲಿಸುವಂತೆಯೂ ಸಂಸದರು ಸೂಚಿಸಿದರು.

ಪೂಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಕಾಮಗಾರಿ ಸಂದರ್ಭ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು.ಈ ಬಗ್ಗೆ ಜನಪ್ರತಿನಿಧಿಗಳಿಗೆ ಮತ್ತು ಸ್ಥಳೀಯ ಗ್ರಾಮ ಪಂಚಾಯತಿಗಳಿಗೆ ಸರಿಯಾದ ಮಾಹಿತಿ ನೀಡಬೇಕು.ಸಮಸ್ಯೆಗಳನ್ನು ಸ್ಥಳೀಯವಾಗಿ ಬಗೆಹರಿಸಬೇಕು ಎಂದು ಅವರು ಸೂಚಿಸಿದರು.

ಲೋಕೋಪಯೋಗಿ ಇಲಾಖೆ ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿ ಶಿವಪ್ರಸಾದ್ ಅಜಿಲ ಮಾತನಾಡಿ, ಇಲ್ಲಿ ಸುಗಮ ಸಂಚಾರಕ್ಕೆ ಬೇಕಾದ ತಾತ್ಕಾಲಿಕ ಕಾಮಗಾರಿಗಳನ್ನು ನಡೆಸಲಾಗಿದೆ. ಗುರುವಾಯನಕೆರೆ-ಉಜಿರೆವರೆಗೆ 9 ಕಿ.ಮೀ ಸರ್ವಿಸ್ ರಸ್ತೆಯು ಯೋಜನೆಯಲ್ಲಿದೆ.ಪ್ರಸ್ತುತ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಆನಂದ್.ಕೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವೇದ್ ಅಝ್ಮಿ, ಪುತ್ತೂರು ಉಪವಿಭಾಗಾಧಿಕಾರಿ ಜುಬಿನ್ ಮೊಹಾಪಾತ್ರ, ಪ್ರೊಬೇಷನರಿ ಐಎಎಸ್ ಅಧಿಕಾರಿ ಪಿ.ಶ್ರವಣ್ ಕುಮಾರ್, ಮಹಾನಗರಪಾಲಿಕೆ ಆಯುಕ್ತ ಆನಂದ್, ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

HPR Institute Of Nursing And Paramedical Sciences & Friends Beke

ಜಾಹೀರಾತು

SendShare11Share
Previous Post

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್: ಜುಲೈ 1ರಿಂದ ರಾಜ್ಯದಲ್ಲಿ ಪ್ರೀಮಿಯಂ ಬ್ರ್ಯಾಂಡ್ ಮದ್ಯ ಬೆಲೆ ಇಳಿಕೆ

Next Post

ಬೆಳ್ತಂಗಡಿ: ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಗೆ ಎರಡು ಲಕ್ಷ ಅನುದಾನ ಒದಗಿಸುವಲ್ಲಿ ಯಶಸ್ವಿಯಾದ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..