ಬೆಂಗಳೂರು: ಇಂದಿನಿಂದ 2023-24ನೇ ಸಾಲಿನ SSLC ವಾರ್ಷಿಕ ಪರೀಕ್ಷೆಗಳು ರಾಜ್ಯದಲ್ಲಿ ಆರಂಭಗೊಳ್ಳಲಿವೆ. ಶಿಕ್ಷಣ ಇಲಾಖೆ ಪರೀಕ್ಷೆಗೆ ತಯಾರಿ ಮಾಡಿಕೊಂಡಿದ್ದು, ರಾಜ್ಯದ 2,750 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ.
ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ರೆಗ್ಯುಲರ್ ವಿದ್ಯಾರ್ಥಿಗಳಾಗಿದ್ದಾರೆ. 18,225 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ರೆ, 41,375 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. ಒಟ್ಟು ವಿದ್ಯಾರ್ಥಿಗಳ ಪೈಕಿ 4,41,910 ಬಾಲಕರು ಮತ್ತು 4,28,058 ಬಾಲಕಿಯರು ಪರೀಕ್ಷೆಯನ್ನು ಬರೆಯುತ್ತಿದ್ದಾರೆ.