ಕರ್ನಾಟಕದ ಫಯರ್ ಬ್ರಾಂಡ್ ಎಂದೇ ಹೆಸರಾಗಿರುವ ಮಾಜಿ ಸಂಸದರಾದ ಅನಂತ್ ಕುಮಾಋ್ ಹೆಗ್ಡೆ ಮನೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಆದರೆ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.
ಶಿರಸಿಯಲ್ಲಿರುವ ಮನೆಗೆ ಇಂದು ಬೆಳಿಗ್ಗೆ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ದುರಂತವಾಗಿದೆ. ಜಿಮ್ ಕೊಠಡಿಯಲ್ಲಿ ಬೆಂಕಿ ಹತ್ತಿಕೊಂಡಿದ್ದು ಜಿಮ್ ಸಾಮಾಗ್ರಿಗಳು ಅಗ್ನಿ ಅಹುತಿಯಾಗಿದೆ, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ತಕ್ಷಣ ಅಗ್ನಿ ಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.