ಪುತ್ತೂರು: ಜಲಸಿರಿ ನೀರು ಸರಬರಾಜು ಯೋಜನೆ ಪ್ರಗತಿ ಪರಿಶೀಲನಾ ಸಭೆಗೆ ಶಾಸಕ ಅಶೋಕ್ ಕುಮಾರ್ ರೈ ಆಗಮಿಸುವಾಗ ವಿಳಂಬವಾಯಿತೆಂದು ನಗರಸಭೆ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ.
ನಗರಸಭೆಯ 24/7 ಜಲಸಿರಿ ನೀರು ಸರಬರಾಜು ಯೋಜನೆಯ ಪ್ರಗತಿ ಪರಿಶೀಲನೆ ಸಭೆ ಇಂದು (ಜೂ.25) ಮಧ್ಯಾಹ್ನ 3.30ಕ್ಕೆ ನಿಗದಿಯಾಗಿತ್ತು.
ನಗರಸಭೆ ಕಚೇರಿ ಸಭಾಭವನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ ಸಭೆ ನಡೆಯಬೇಕಾಗಿತ್ತು. ಆದರೆ ಶಾಸಕರು ಸಭೆಗೆ ಬರುವುದು ತಡವಾಯಿತೆಂದು ಆರೋಪಿಸಿದ ನಗರಸಭೆ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ.