ಬೆಂಗಳೂರು: ರಾಕೇಶ್ ಶೆಟ್ಟಿ ಮಾಲತ್ವದ ಪವರ್ ಟಿವಿ ಪ್ರಸಾರ ನಿಲ್ಲಿಸುವಂತೆ ಹೈಕೋರ್ಟ್ ಆದೇಶ.
ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪವರ್ ಟಿ.ವಿ. ಕನ್ನಡ ಚಾನೆಲ್ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸರಣವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ.
2021ರಿಂದಲೂ ಚಾನೆಲ್‌ನ ಪರವಾನಗಿ ನವೀಕರಿಸಿಲ್ಲ’ ಎಂಬ ಅಂಶಗಳನ್ನು ವಿಸ್ತೃತವಾಗಿ ನ್ಯಾಯಪೀಠದ ಗಮನಕ್ಕೆ ಬಂದ ಹಿನ್ನಲೆಯಲ್ಲಿ ಈ ಆದೇಶ ಬಂದಿದೆ.
ಸುದೀರ್ಘ ವಾದ ಆಲಿಸಿದ ನ್ಯಾಯಪೀಠ, ‘ಪ್ರತಿವಾದಿ ರಾಕೇಶ್ ಶೆಟ್ಟಿ, ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ಗಳ (ನಿಯಂತ್ರಣ) ಕಾಯ್ದೆ-1995ರ ಆದೇಶವನ್ನು ಉಲ್ಲಂಘಿಸಿರುವ ಕಾರಣ ತಕ್ಷಣದಿಂದಲೇ ತಮ್ಮ ಚಾನೆಲ್‌ನಲ್ಲಿ ಸುದ್ದಿಗಳೂ ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ಜುಲೈ 8ರವರೆಗೆ ಪ್ರಸಾರ ಮಾಡಬಾರದು’ ಎಂದು ಪ್ರಕರಣದ ಪ್ರತಿವಾದಿಯಾದ ಮೆಸರ್ಸ್ ಪವರ್ ಸ್ಮಾರ್ಟ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯ ಪ್ರತಿನಿಧಿಯಾಗಿರುವ ಹೆಚ್ಚುವರಿ ನಿರ್ದೇಶಕ ರಾಕೇಶ್ ಸಂಜೀವ ಶೆಟ್ಟಿ ಅಲಿಯಾಸ್ ರಾಕೇಶ್ ಶೆಟ್ಟಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.