ಮಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೊ ಗಗನಯಾನ ಯೋಜನೆ ಅಡಿ ಬಾಹ್ಯಾಕಾಶಕ್ಕೆ ಹಾರಲಿರುವ ನಾಲ್ವರು ಭಾರತೀಯ ಗಗನಯಾತ್ರಿಗಳ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ.
ಕೇರಳದ ತಿರುವನಂತಪುರಂನಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಗಗನಯಾತ್ರಿಗಳ ಹೆಸರನ್ನು ಘೋಷಿಸಿದ್ದಾರೆ. ಕ್ಯಾಪ್ಟನ್ ಪಿ. ಬಾಲಕೃಷ್ಣನ್ ನಾಯರ್, ಗ್ರೂಪ್ ಕ್ಯಾಪ್ಟನ್ ಅಜಿತ್ ಕೃಷ್ಣನ್, ಗ್ರೂಪ್ ಕ್ಯಾಪ್ಟನ್ ಅಂಗದ್ ಪ್ರತಾಪ್ ಮತ್ತು ವಿಂಗ್ ಕಮಾಂಡರ್ ಎಸ್. ಶುಕ್ಲಾ ಅವರು ಕಕ್ಷೆಗೆ ಹಾರಲಿರುವ ಗಗನಯಾನಿಗಳಾಗಿದ್ದು, ಅವರಿಗೆ ರೆಕ್ಕೆಗಳನ್ನು ನೀಡುವ ಮೂಲಕ ಮೋದಿ ಶುಭ ಕೋರಿದ್ದಾರೆ.