ಕೊಡಗು: ಎಂದಿನಂತೆ ಕಚೇರಿಗೆ ತೆರಳಲು ರೆಡಿಯಾಗತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ 24 ವರ್ಷದ ಯುವತಿ ಸಾವನ್ನಪ್ಪಿರುವ ಘಟನೆ ಮಡಿಕೇರಿ ತಾಲೂಕಿನ ನೆಲಜಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.
ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ (24) ಮೃತ ಯುವತಿ. ಇವರು ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಈ ಹಿನ್ನೆಲೆಯಲ್ಲಿ ಎಂದಿನಂತೆ ಕೆಲಸಕ್ಕೆ ತೆರಳಲು ಇಂದು ಬೆಳಗ್ಗೆ ಮನೆಯಲ್ಲಿ ರೆಡಿಯಾಗುತ್ತಿದ್ದರು. ಈ ವೇಳೆ ಹೃದಯಾಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಗಳನ್ನು ಕಳೆದುಕೊಂಡ ಪೋಷಕರು,ಆಕ್ರಂದನ ಮುಗಿಲು ಮುಟ್ಟಿದೆ.



                                









			










