ಪುತ್ತೂರು: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಸಿಂಗಾಣಿಯಲ್ಲಿ ಅಪಾಯದಂಚಿನಲ್ಲಿರುವ ಹಲವಾರು ಮನೆಗಳು ಧರೆ ಕುಸಿತ ಭೀತಿಯಿಂದ ದಿನಕಳೆಯುವಂತಾಗಿದೆ.
ಅಪಾಯದಂಚಿನಲ್ಲಿ ಗುಡ್ಡ ಪ್ರದೇಶಕ್ಕೆ ಭೇಟಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ನಗರಸಭಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಳೆದ ಕೆಲವು ವರ್ಷಗಳ ಹಿಂದೆ ಈ ಭಾಗದಲ್ಲಿ ಕುಸಿತ ಉಂಟಾದ ಪರಿಣಾಮ ಹಲವು ಮನೆಯವರನ್ನು ಅಲ್ಲಿಂದ ಬೇರೆಡೆಗೆ ಕಳುಹಿಸಲಾಗಿತ್ತು. ಬಳಿಕ ಕುಸಿತ ನಿಲುಗಡೆಯಾಗಿತ್ತು. ಇದೀಗ ಈ ಮಳೆಗಾಲದಲ್ಲಿ ಮತ್ತೆ ಕುಸಿತದ ಭೀತಿ ಉಂಟಾಗಿದೆ. ಈ ಕುರಿತು ಸಂಬಂಧ ಪಟ್ಟ ಇಲಾಖೆ ತುರ್ತು ಕ್ರಮಕೈಗೊಳ್ಳುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.