ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಹೆಚ್ಚಳ ಮಾಡುತ್ತಿರುವ ರಾಜ್ಯ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ಹಾಗಾಗಿ ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭವಿಷ್ಯ ನುಡಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರೊಂದಿಗೆ ಮಾತನಾಡಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ವಾರದಲ್ಲಿ ಒಂದು ದಿನ ಜಿಲ್ಲೆಯ ಪ್ರವಾಸ ಕೈಗೊಳ್ಳುತ್ತಾರೆ, ಆ ಮೂಲಕ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸುವರು, ಈಗ ಅವರು ದೇಶ, ರಾಜ್ಯ ಹಾಗೂ ಮಂಡ್ಯ ಜಿಲ್ಲೆಯ ಅಭಿವೃದ್ಧಿ ಪರ ಕೆಲಸ ಮಾಡಬೇಕಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ರಾಜ್ಯ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಹೆಚ್ಚಳ ಮಾಡುತ್ತಿದೆ, ಕಾಂಗ್ರೆಸ್ ಗ್ಯಾರಂಟಿ ಯೋಜನೆಯು ಕಾರ್ಯಕ್ಷಮತೆ ಇಲ್ಲ, ಜನರು ಗ್ಯಾರಂಟಿ ಯೋಜನೆ ಕೇಳಿಲ್ಲ. ಹಾಗಾಗಿ ಈ ಕಾಂಗ್ರೆಸ್ ಸರ್ಕಾರ ಹೆಚ್ಚು ದಿನ ಉಳಿಯೋದು ಕಷ್ಟವಿದೆ ಎಂದು ಟೀಕಿಸಿದರು.