ಪುತ್ತೂರು:ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆಯಾಗಿ ನೂತನ ಎಸ್ಪಿಯಾಗಿ ಯತೀಶ್.ಎನ್ ನೇಮಕವಾಗಿದ್ದಾರೆ.ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2016 ರ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ ಯತೀಶ್ ಎನ್. ಅವರು ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಇನ್ನೂ ಹಲವಾರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಮಂಡ್ಯ ಎಸ್ಪಿಯಾಗಿದ್ದ ಯತೀಶ್ ದಕ್ಷಿಣ ಕನ್ನಡಕ್ಕೆ ನೂತನ ಎಸ್ಪಿಯಾಗಿ ನೇಮಕವಾಗಿದ್ದು, ಬೆಂಗಳೂರು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ರಿಷ್ಯಂತ್ ವರ್ಗಾವಣೆಯಾಗಿದ್ದಾರೆ.