ವಿಶ್ವ ಹಿಂದೂ ಪರಿಷತ್ತಿನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ.
ನಿನ್ನೆ ವಿಶ್ವ ಹಿಂದೂ ಪರಿಷತ್ತಿನ ಜಿಲ್ಲೆಯ ಕಾರ್ಯಾಲಯದಲ್ಲಿ ನೆಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು.
ಆ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾ ಉಪಾಧ್ಯಕ್ಷ ಸತೀಶ್ ಬಿ. ಎಸ್., ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸೇವಾ ಪ್ರಮುಖ್ ಸೀತಾರಾಮ ಭಟ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಮತ್ತಿತರರು ಉಪಸ್ಥಿತರಿದ್ದರು.