ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟ ಕಾಮಗಾರಿಗಳ ಕುರಿತು ಸಚಿವರ ಜೊತೆ ಸಂಸದರು ಚರ್ಚೆ ನಡೆಸಿದರು.
ಶಿರಾಡಿ ಘಾಟಿಯ ಮೂಲಕ ಹಾದುಹೋಗುವ ಮಂಗಳೂರು – ಬೆಂಗಳೂರು ನಡುವಿನ ರಸ್ತೆ ಪ್ರಯಾಣದ ಅವಧಿಯನ್ನು ಕಡಿಮೆ ಮತ್ತು ಸುಗಮಗೊಳಿಸಲು ಕೈಗೊಳ್ಳಬಹುದಾದ ಯೋಜನೆಗಳ ಕುರಿತು ಅಧ್ಯಯನ ನಡೆಸುವಂತೆ ಸಂಸದರು ಕೇಳಿಕೊಂಡರು.