ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು 50,000 ರೂ. ಸಹಾಯಧನವನ್ನು ನೀಡಿದರು.
ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾ ಬಳ್ಳಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಈ ವೇಳೆ ಉಪಸ್ಥಿತರಿದ್ದರು.
ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸದಸ್ಯರಾಗಿರುತ್ತಾರೆ.
ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ.