ಬೆಂಗಳೂರು: ಬಿಲ್ಲವರ ಕೈ ಹಿಡಿದು ಗ್ಯಾರಂಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವಿನ ನಂತರ ಗ್ಯಾರಂಟಿ ಸರಕಾರ ಅಸ್ತಿತ್ವಕ್ಕೆ ಬಂದು ಒಂದು ವರ್ಷ ಯಶಸ್ವಿಯಾಗಿದೆ.
ಬಿಲ್ಲವರಿಗೆ ಗ್ಯಾರಂಟಿ ನೀಡಿದ ಸಿ ಎಂ:
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವೇಣೂರು ಮತ್ತು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ನಾರಾಯಣ ಗುರು ಸಭಾಭವನ ನಿರ್ಮಿಸಲು ಜಮೀನು ಮಂಜೂರು ಮಾಡಲು ಅಸ್ತು ಎಂದಿದ್ದಾರೆ.
ಮಾಜಿ ಶಾಸಕ ಕೆ. ವಸಂತ ಬಂಗೇರ ಮತ್ತು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಮನವಿಗೆ ಸ್ಪಂದಿಸಿದ ಸಚಿವ ಸಂಪುಟ ಬೆಳ್ತಂಗಡಿ ತಾಲೂಕು ವೇಣೂರು ಬ್ರಹ್ಮ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಉತ್ತೇಜಿಸಲು ವೇಣೂರು ಗ್ರಾಮದ ಸ. ನಂ 59/1 ರಲ್ಲಿ 0.14 ಸೆಂಟ್ಸ್ ಜಮೀನನ್ನು ಮಂಜೂರುಗೊಳಿಸಿದೆ. ಜೊತೆಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘಕ್ಕೆ ಸಮುದಾಯಭವನ ನಿರ್ಮಾಣಕ್ಕಾಗಿ 20 ಗುಂಟೆ ಜಮೀನು ಮಂಜೂರುಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.