ಪುತ್ತೂರು: ಅಡಿಕೆ ಕೃಷಿಗೆ ಬಾಧಿಸುವ ರೋಗಗಳು ಮತ್ತು ಕೃಷಿಕರ ಇತರೆ ಸಮಸ್ಯೆಗಳ ಬಗ್ಗೆ ವಿಚಾರ ವಿನಿಮಯ
ಪುತ್ತೂರು ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಇವರ ಸಾರಥ್ಯದಲ್ಲಿ ತೋಟಗಾರಿಕೆ ಇಲಾಖೆ ಪುತ್ತೂರು ಇವರ ಸಹಭಾಗಿತ್ವದಲ್ಲಿ “ಅಡಿಕೆ ತೋಟಗಳಿಗೆ ಬಾಧಿಸುತ್ತಿರುವ ರೋಗಗಳು ಮತ್ತು ಅಡಿಕೆ ಕೃಷಿಕರ ಇತರ ಸಮಸ್ಯೆಗಳ ಬಗ್ಗೆ” ವಿಚಾರ ವಿನಿಮಯ ಕಾರ್ಯಕ್ರಮ ತಾ.09-07-24 ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಪಂಜಿಗುಡ್ಡೆ ಈಶ್ವರ ಭಟ್ ಮನೆಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಶಾಸಕ ಅಶೋಕ್ ರೈ ಉದ್ಘಾಟಿಸಲಿದ್ದು, ಪ್ರಗತಿಪರ ಕೃಷಿಕರಾದ ಶ್ರೀ ರಮೇಶ್ ದೇಲಂಪಾಡಿ ವಿಚಾರ ಮಂಡಿಸಲಿದ್ದಾರೆ.
ಹಲವಾರು ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಕೃಷಿ ತಜ್ಞ ಪೆರ್ವೋಡಿ ನಾರಾಯಣ ಭಟ್ ಅವರನ್ನು ಸನ್ಮಾನಿಸಲಿದ್ದಾರೆ. ಸಾರ್ವಜನಿಕರು ಹಾಗೂ ಕೃಷಿಕರು ಹೆಚ್ವಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾರ್ಯಕ್ರಮ ಸಂಯೋಜಕರಾದ ಪಂಜಿಗುಡ್ಡೆ ಈಶ್ವರ ಭಟ್ ಹಾಗೂ ಶ್ರೀ ನವೀನ್ ರೈ ಚೆಲ್ಯಡ್ಕ ಗ್ರಾಮ.ಪಂ.ಸದಸ್ಯರು ಬೆಟ್ಟಂಪಾಡಿ ತಿಳಿಸಿದ್ದಾರೆ