ಯುವಕರಿಗೆ ತರಬೇತಿ ನೀಡಿ ಉದ್ಯೋಗ ಒದಗಿಸಿ ಪಿಎಂ ಸ್ವನಿಧಿ ನಗರ ಪ್ರದೇಶಗಳಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ನೀಡುವ ಪಿಎಂ ಸ್ವನಿಧಿ ಯೋಜನೆಯಡಿ ಕೇಂದ್ರ ಸರ್ಕಾರ ನಿಗದಿ ಪಡಿಸಿದ ಗುರಿಗಿಂತ ಹೆಚ್ಚಿನ ಸಾಧನೆಯಾಗಿದೆ. ಶೇ. 54 ರಷ್ಟು ಮಹಿಳೆಯರು ಸಾಲ ಸೌಲಭ್ಯ ಪಡೆದಿದ್ದಾರೆ. ಉಡುಪಿ, ಕೊಡಗು, ಯಾದಗಿರಿ, ಚಾಮರಾಜನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ನಿಗದಿತ ಗುರಿಗಿಂತ ಹೆಚ್ಚಿನ ಸಾಧನೆಯಾಗಿದೆ. ಯುವ ನಿಧಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಕೈಗಾರಿಕೋದ್ಯಮಗಳಲ್ಲಿ ಬೇಡಿಕೆಗೆ ಅನುಗುಣವಾದ ತರಬೇತಿ ನೀಡಿ ಉದ್ಯೋಗ ಒದಗಿಸಲು ಸಿಎಂ ಸೂಚಿಸಿದರು.
ಯುವ ನಿಧಿ ಯೋಜನೆಯಲ್ಲಿ ನಿರುದ್ಯೋಗ ಭತ್ಯೆ ಎರಡು ವರ್ಷ ಮಾತ್ರ ನೀಡುವ ಕಾರಣ, ಅಷ್ಟರೊಳಗೆ ಅವರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಉದ್ಯೋಗ ಪಡೆಯಲು ಅನುವು ಮಾಡಿಕೊಡಬೇಕು. ಕಲಿಕೆ ಜೊತೆ ಕೌಶಲ್ಯ ಯೋಜನೆಯಡಿ ಕಲಿಯುವ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡುವ ಮೂಲಕ ಅವರಿಗೆ ಹೆಚ್ಚಿನ ಉದ್ಯೋಗವಾಕಾಶ ಕಲ್ಪಿಸಲಾಗುತ್ತಿದೆ. ಜಿಟಿಟಿಸಿ ಸಂಸ್ಥೆಗಳನ್ನು ಉನ್ನತೀಕರಿಸಿ, ಪ್ರವೇಶಾವಕಾಶವನ್ನು 3000 ದಿಂದ 5,000 ಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.