ಮಂಗಳೂರು: ಹಿಂದೂ ಯುವತಿ ಮುಸ್ಲಿಂ ಯುವಕ ಅಶ್ಪಕ್ ಜೊತೆ ಪತ್ತೆ. ಲವ್ ಜಿಹಾದ್ ಶಂಕೆ
ನಟೋರಿಯಸ್ ಮಹಮ್ಮದ್ ಅಶ್ಪಕ್ ಎಂಬಾತ ಹುಡುಗಿಯನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ನಾಪತ್ತೆಯಾಗಿದ್ದ ಯುವತಿನ್ನು ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದು, ಪ್ರಕರಣ ಈಗ ತಾನೇ ಬೆಳಕಿಗೆ ಬಂದಿದೆ.
ಮಹಮ್ಮದ್ ಅಶ್ಪಕ್ ಈಗಾಗಲೇ ಒಂದು ಮದುವೆಯಾಗಿದ್ದು ಕಾಸರಗೋಡು ವಿದ್ಯಾನಗರ ಠಾಣೆಯಲ್ಲಿ ಇವನ ಮೇಲೆ ಎಂಟು ಕ್ರಿಮಿನಲ್ ಕೇಸು ದಾಖಲಿದೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಓದುತ್ತಿದ್ದ ಹಿಂದೂ ಯುವತಿಯನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿರುವ ಬಗ್ಗೆ ಹುಡುಗಿಯ ತಂದೆ ಮಂಗಳೂರು ಪೊಲೀಸ್ ಕಮೀಷನರ್ ರವರಿಗೆ ದೂರು ನೀಡಿದ್ದು ದೂರಿನನ್ವಯ ಪತ್ತೆ ಹಚ್ಚಲಾಗಿದೆ.
ಸದ್ಯ ಯುವತಿಯನ್ನು ಪತ್ತೆಹಚ್ಚಿ ಕರೆತಂದಿದ್ದು, ಯುವತಿಯನ್ನು ಪ್ರಜ್ಞಾ ಸಲಹಾ ಕೇಂದ್ರ ಮುಡಿಪು ಇಲ್ಲಿ ಇರಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಾಗಿದ್ದು, ಈ ಬಗ್ಗೆ ಸಾರ್ವಜನಿಕ ವಲಯ ಮತ್ತು ಹಿಂದು ಸಂಘಟನೆಗಳು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಲವ್ ಜಿಹಾದ್ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಇದರ ಹಿಂದಿನ ಕಾಣದ ಕೈ ಏನಿದೆ ತಿಳಿಯಬೇಕಾಗಿದೆ. ಈಗಾಗಲೇ ಹೆಚ್ಚೆಚ್ಚು ಲವ್ ಜಿಹಾದ್ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಪ್ರಸ್ತುತ ಈ ಪ್ರಕರಣದ ಮಾಹಿತಿಗಳು ತಿಳಿದು ಬರಬೇಕಿದೆ.