ಲೋಕಾಸಭಾ ಚುನಾವಣೆ ಗೆಲುವಿನ ನಂತರ ಇಂದು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣದಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ಕಚೇರಿ ಕಾರ್ಯಾರಂಭವಾಗಿದೆ.
ವೈಧಿಕ ಪೂಜೆ ನಡೆದು ಕಛೇರಿ ಉದ್ಘಾಟನೆಗೊಂಡಿತು.
ಉದ್ಘಾಟನೆಯನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ದಂಪತಿಗಳು ನೆರೆವೇರಿಸಿದರು. ಕಾರ್ಯಕ್ರಮದಲ್ಲಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಜಪ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಶಾಸಕರಾದ ವೇದವ್ಯಾಸ್ ಕಾಮತ್,
ರಾಜೇಶ್ ನಾಯ್ಕ್, ಭರತ್ ಶೆಟ್ಟಿ, ಹರೀಶ್ ಪೂಂಜ, ಮಾಜಿ ಶಾಸಕರಾದ ಯೋಗಿಶ್ ಭಟ್,ಎಂ ಎಲ್ ಸಿ ಪ್ರತಾಪ್ ಸಿಂಹ ನಾಯಕ್, ಮೇಯರ್ ಸುಧೀರ್ ಶೆಟ್ಟಿ ಕನ್ನೂರು,ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮಾಜಿ ಎಂ ಎಲ್ ಸಿ ಮೋನಪ್ಪ ಭಂಡಾರಿ ಪ್ರಮುಖರು
ಉಪಸ್ಥಿತರಿದ್ದರು.