ಬೆಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ, ಪಶ್ಚಿಮ ಘಟ್ಟದ ಜಿಲ್ಲೆಗಳಾದ ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ನಾಳೆ ಅತಿ ಭಾರೀ ಮಳೆಯಾಗಲಿದೆ. ಮಳೆ ಪ್ರಮಾಣ 204.5 mm ದಾಟುವ ಸಾಧ್ಯತೆ ಇರುವುದರಿಂದ ಇಂದು ಮತ್ತು ನಾಳೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆ ಹಾಗೊ ಒಂದು ಅಥವಾ ಎರಡು ಸ್ಥಳಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (40-50 ಕಿಮೀ) ತಲುಪುವ ಸಾಧ್ಯತೆಯಿದೆ.