ಬೆಂಗಳೂರು: ಜುಲೈ 16ರಂದು ಕತ್ರಿನಾ ಕೈಫ್ ಅವರ ಜನ್ಮದಿನ. ಇದಕ್ಕೂ ಮುನ್ನ ಮಂಗಳೂರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ. ಶಿಲ್ಪಾ ಶೆಟ್ಟಿ, ಸುನೀಲ್ ಶೆಟ್ಟಿ ಮೊದಲಾದವರು ಆಗಾಗ ಇಲ್ಲಿಗೆ ಆಗಮಿಸಿ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ, ಬಾಲಿವುಡ್ನ ಉಳಿದವರಿಗೂ ಈ ಬಗ್ಗೆ ನಂಬಿಕೆ ಮೂಡಿದೆ. ಕತ್ರಿನಾ ಕೈಫ್ ಜೊತೆ ಸುನೀಲ್ ಶೆಟ್ಟಿ ಫ್ಯಾಮಿಲಿ ಕೂಡ ಇಲ್ಲಿಗೆ ಆಗಮಿಸಿದೆ. ಸುನೀಲ್ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಅಥಿಯಾ ಶೆಟ್ಟಿ ಹಾಗೂ ಅಳಿಯ ಕೆ.ಎಲ್. ರಾಹುಲ್ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಕೆ ಮಾಡಿದ್ದಾರೆ.
ಭಾರತ ತಂಡದ ಬಲಗೈ ಬ್ಯಾಟರ್ ಹಾಗೂ ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ ಇಲ್ಲಿನ ಐತಿಹಾಸಿಕ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಭಾನುವಾರ ಭೇಟಿ ನೀಡಿದ್ದಾರೆ. ಪತ್ನಿ ಅಥಿಯಾ ಶೆಟ್ಟಿ ಅವರ ಜತೆ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದರು. ಬಪ್ಪನಾಡು ಕ್ಷೇತ್ರವು ಮಂಗಳೂರು ನಗರದ ಹೊರವಲಯದ ಮುಲ್ಕಿ ಸಮೀಪ ಇದೆ. ದೇಗುಲಕ್ಕೆ ಭೇಟಿ ನೀಡಿದ ದಂಪತಿಗೆ ದೇವಾಲಯದ ವತಿಯಿಂದ ವಿಶೇಷ ಗೌರವ ಸಲ್ಲಿಸಲಾಯಿತು.
ವಿಶ್ವ ಕಪ್ ತಂಡದಲ್ಲಿ ಅವಕಾಶ ಪಡೆಯದೇ ಕೆ. ಎಲ್ ರಾಹುಲ್ ಮುಂಬರುವ ಶ್ರೀಲಂಕಾ ಪ್ರವಾಸದಲ್ಲಿ ಭಾರತ ತಂಡ ಸೇರುವ ನಿರೀಕ್ಷೆಯಿದೆ. ಆದರೆ ಅದಿನ್ನೂ ಸ್ಪಷ್ಟವಾಗಿಲ್ಲ. ತಂಡವೂ ಪ್ರಕಟಗೊಂಡಿಲ್ಲ. ಅವಕಾಶದ ನಿರೀಕ್ಷೆಯಲ್ಲಿರುವ ಅವರೀಗ ಅಮೂಲ್ಯ ಸಮಯವನ್ನು ಕುಟುಂಬದ ಜತೆ ಕಳೆಯುತ್ತಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಅನಂತ್ ಅಂಬಾನಿ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ದಂಪತಿ ಜತೆಯಾಗಿ ಭಾಗಿಯಾಗಿದ್ದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿಕಾಣಿಸಿಕೊಂಡಿದ್ದವು.