ಕೈಕಂಬ : ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕಲ್ಲಕಲಂಬಿ ಎಂಬಲ್ಲಿ ಜು.೧೯ ರಂದು ಶುಕ್ರವಾರಇಂದು ಮುಂಜಾನೆ ಕಡಿದು ಬಿದ್ದಿದ್ದ ವಿದ್ಯುತ್ ತಂತಿಗೆ ತಗುಲಿದ ಕಾಲೇಜಿ ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಹಸು ನೀಗಿದ್ದಾಳೆ.
ಮೃತ ವಿದ್ಯಾರ್ಥಿನಿ ಆಶ್ನಿ ಶೆಟ್ಟಿ(೨೧) ಮಂಗಳೂರಿನ ಕಾಲೇಜಲ್ಲಿ ಚಾರ್ಟೆಡ್ ಅಕೌಂಟೆಂಟ್ ಕಲಿಯುತ್ತಿದ್ದಳು. ಈಕೆ ಗುರುಪುರ ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬವರ ಪುತ್ರಿಯಾಗಿದ್ದಾಳೆ.
ಹರೀಶ್ ಶೆಟ್ಟಿ ಅವರು ತಮ್ಮ ಮನೆಯ ದನಗಳನ್ನು ಗದ್ದೆಯಲ್ಲಿ ಮೇಯಲು ಕಟ್ಟಲು ಹೋಗಿದ್ದು, ಅವರ ಹಿಂದೆ ಮನೆಯ ಎರಡು ನಾಯಿಗಳು ಹೋಗಿದ್ದವು. ತಮ್ಮ ಮನೆಯ ನಾಯಿಗಳನ್ನು ತರಲೆಂದು ಆಶ್ನಿ ಪ್ರಯತ್ನಿಸಿದಾಗ ಅದಾಗಲೇ ಕಡಿದು ಬಿದ್ದಿದ್ದ ವಿದ್ಯುತ್ ತಂತಿ ತಗುಲಿದ್ದು, ತೀವ್ರ ಅಸ್ವಸ್ಥ ಗೊಂಡ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ.
ವಿದ್ಯುತ್ ತಂತಿ ಬಿದ್ದಿದ್ದ ಸ್ಥಳದಲ್ಲಿ ಮೂರು ನಾಯಿಗಳು ಹಾಗೂ ಒಂದು ಕೇರೆ ಹಾವು ಸತ್ತು ಬಿದ್ದಿದೆ.