ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸರ್ಕಾರಿ ನೌಕರರ ಮೇಲಿದ್ದ ನಿರ್ಬಂಧವನ್ನು ತೆಗೆದು ಹಾಕುವ ಮೂಲಕ ಐತಿಹಾಸಿಕ ನಿರ್ಣಯವನ್ನು ಕೈಗೊಂಡ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ನಮ್ಮ ಕೇಂದ್ರ ಸರಕಾರಕ್ಕೆ ಅಭಿನಂದನೆಗಳು ಮತ್ತು ಕೃತಜ್ಞತೆಯನ್ನು ಅರ್ಪಿಸುತ್ತೇನೆ.
ಕಳೆದ 99 ವರ್ಷಗಳಿಂದ ರಾಷ್ಟ್ರದ ಪುನರ್ ನಿರ್ಮಾಣದ ಸಂಕಲ್ಪದೊಂದಿಗೆ ವ್ಯಕ್ತಿ ನಿರ್ಮಾಣದ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸಬಾರದೆಂಬ ಈ ಹಿಂದಿನ ರಾಜಕೀಯ ಪ್ರೇರಿತವಾದ ನಿರ್ಬಂಧವನ್ನು ಕೇಂದ್ರ ಸರಕಾರ ತೆಗೆದು ಹಾಕುವ ಮೂಲಕ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಿದೆ.
ರಾಷ್ಟ್ರೀಯ ಚಿಂತನೆಯ ಚಟುವಟಿಕೆಗಳ ಮೂಲಕ ದೇಶಭಕ್ತಿಯ ಕಾರ್ಯವನ್ನು ನಾಡಿನಾದ್ಯಂತ ಪಸರಿಸುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯದಲ್ಲಿ ಭಾಗವಹಿಸುವುದನ್ನು ಸಹಿಸದ ಸ್ಥಾಪಿತ ಹಿತಾಸಕ್ತಿಗಳು ತಮ್ಮ ವೋಟ್ ಬ್ಯಾಂಕಿನ ಲಾಭಕ್ಕೋಸ್ಕರ ಸರ್ಕಾರಿ ನೌಕರರು ಆರ್ ಎಸ್ ಎಸ್ ನ ಚಟುವಟಿಕೆಗಳಿಂದ ದೂರವಿರುವಂತೆ ಮಾಡಿತ್ತು. ಆದರೆ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆ ನಿರ್ಬಂಧಕ್ಕೆ ತೀಲಾಂಜಲಿಯನ್ನು ಇಟ್ಟು, ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಷ್ಟ್ರ ಕಾರ್ಯದಲ್ಲಿ ಸರ್ಕಾರಿ ನೌಕರರು ಮುಕ್ತವಾಗಿ ಭಾಗವಹಿಸುವ ಅವಕಾಶವನ್ನು ಮಾಡಿಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ.