ಮಂಗಳೂರು: ಕರಾವಳಿಯಲ್ಲಿ ಮಳೆಯ ಅವಾಂತರ ಮುಂದುವರಿದಿದೆ . ಭಾರಿ ಗಾಳಿ ಮಳೆಗೆ ಮನೆ ಕುಸಿದು ಬಾಲಕ ಮೃತಪಟ್ಟಿರುವ ಘಟನೆ ದ.ಕ. ಜಿಲ್ಲೆಯ ಮಂಗಳೂರು ತಾಲೂಕಿನ ಜೋಕಟ್ಟೆ ಬಳಿ ನಡೆದಿದೆ. ಮೃತ ಬಾಲಕನ್ನು ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಎಂದು ಗುರುತಿಸಲಾಗಿದೆ.
ಭಾರಿ ಗಾಳಿ-ಮಳೆಗೆ ಮನೆಯ ಮೇಲೆ ತಡೆಗೋಡೆ ಕುಸಿದು ಈ ದುರಂತ ಸಂಭವಿಸಿದೆ. ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿಯಾಗಿರುವ ಶೈಲೇಶ್ ಕುಸಿತವಾದ ಮನೆಗೆ ಅತಿಥಿಯಾಗಿ ಬಂದಿದ್ದ. ಬುಧವಾರ ರಾತ್ರಿ ಮಂಗಳೂರು ಭಾಗದಲ್ಲಿ ಭಾರಿ ಮಳೆಯಾಗಿತ್ತು. ಈ ಹಿನ್ನಲೆಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿದು ಬಿದ್ದಿದೆ