ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದಲ್ಲಿ ಬಿಜೆಪಿ ಅವಧಿಯ 21 ಹಗರಣ ಬಯಲಿಗೆ ಸಾಧ್ಯತೆ. ಬೋವಿ ನಿಗಮದ ಒರ್ವನ ಬಂಧನ
ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಮತ್ತಿತರ ಹಗರಣಗಳನ್ನು ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ತೀವ್ರಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ ಬೆನ್ನಲ್ಲೇ ರಾಜ್ಯ ಭೋವಿ ನಿಗಮದ ಕೋಟ್ಯಾಂತರ ರೂಪಾಯಿ ಅವ್ಯವಹಾರ ಪ್ರಕರಣ ಸಂಬಂಧ ನಿಗಮದ ಕಚೇರಿ ಅಧೀಕ್ಷಕ ಪಿ.ಡಿ.ಸುಬ್ಬಪ್ಪ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
2021-22ನೇ ಸಾಲಿನಲ್ಲಿ ಭೋವಿ ಸಮುದಾಯದ ಉದ್ಯಮಿಗಳಿಗೆ ನಿಗಮವು ನೀಡುವ ಆರ್ಥಿಕ ಸಾಲ ಯೋಜನೆಯಲ್ಲಿ ಕೋಟ್ಯಾಂತರ ರೂಪಾಯಿ ಮೊತ್ತದ ಅಕ್ರಮ ನಡೆದಿದೆ ಎಂದು ಆರೋಪಿಸಿ ಬೆಂಗಳೂರು ನಗರದ ಸಿದ್ದಾಪುರ, ಕಲಬುರಗಿ ಜಿಲ್ಲೆಯ ಕಾಳಗಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಈಗ ಮುಡಾ ಪ್ರಕರಣ ಮತ್ತು ವಾಲ್ಮೀಕಿ ಹಗರಣದ ಬಗ್ಗೆ ಬಿಜೆಪಿ ಪ್ರತಿಭಟನೆ ಟೊಂಕ ಕಟ್ಟಿದ್ದು ಕಾಂಗ್ರೆಸ್ ಗೆ ತಲೆನೋವಾಗಿ ಪರಿಣಮಿಸಿದೆ. ತದ್ವಿರುದ್ಧವಾಗಿ ಸಿದ್ದರಾಮಯ್ಯ ಬಿಜೆಪಿ ಸರಕಾರದ ಸಮಯದ ಹಗರಣವನ್ನು ಹೊರತೆಗೆಯುತ್ತಿರುವುದು ಬಿಜೆಪಿ ನಾಯಕರಿಗೆ ಸಂಕಷ್ಟ ಎದುರಾಗಿದೆ.