ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಯಲ್ಲಿ ಓರ್ವ ಗಾಂಜಾ ಸೇವನೆ ಮಾಡಿದ್ದು ದೃಢಪಟ್ಟ ಹಿನ್ನಲೆ ಓರ್ವನನ್ನು ಪುತ್ತೂರು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಪುತ್ತೂರು ಕಬಕ ನಿವಾಸಿ ಪ್ರಕಾಶ್ ಬಂಧಿತ ಆರೋಪಿ.
ನೆಹರುನಗರದಲ್ಲಿ ಇಬ್ಬರು ಅನುಚಿತವಾಗಿ ವರ್ತಿಸುತ್ತಿದ್ದರು ಮತ್ತು ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದರು ಎಂಬ ಮಾಹಿತಿ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಆಂಜನೇಯ ರೆಡ್ಡಿ ಹಾಗೂ ಸಿಬ್ಬಂದಿಗಳೊಂದಿಗೆ ತೆರಳಿ ಬಂಧಿಸಿದ್ದಾರೆ.
ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಅ. ಕ್ರ. 69/2024 ಕಲಂ 27(b) NDPS ಕಾಯ್ದೆ ಯಡಿ ಪ್ರಕರಣ ದಾಖಲಾಗಿದೆ.