ಪುತ್ತೂರು: ಮಾಣಿ-ಮೈಸೂರು ಹೆದ್ದಾರಿಯ ಶೇಖಮಲೆ ಎಂಬಲ್ಲಿ ಶಾಲೆಯ ಬಳಿ ಗುಡ್ಡ ಕುಸಿತ ಸಂಭವಿಸಿದೆ.
ಬಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ತಡೆ ಉಂಟಾಗಿದೆ. ಗುಡ್ಡ ಕುಸಿತದಿಂದಾಗಿ ಈಗಾಗಲೇ 4 ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ಗುಡ್ಡ ಕುಸಿತ ಮುಂದುವರಿದಿದ್ದು 2 ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸಂಬಂಧಪಟ್ಟವರ ಕಾರ್ಯಾಚರಣೆಗೆ ಪ್ರಯಾಣಿಕರು ಕಾಯುತ್ತಿದ್ದಾರೆ. ಸದ್ಯ ಪುತ್ತೂರು ಸುಳ್ಯ ರಸ್ತೆ ಸಂಚಾರ ಬಂದ್ ಆಗಿದೆ.