ಬಾಗಲಕೋಟೆ: ಅನಗತ್ಯವಾಗಿ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಎಸ್ಪಿಗಳಿಗೆ ಸೂಚನೆ ಕೊಟ್ಟದ್ದೇನೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು.
ಘಟಪ್ರಭಾ ನದಿ ಪ್ರವಾಹಕ್ಕೆ ಬಾಗಲಕೋಟೆ ಜಿಲ್ಲೆ ತತ್ತರಿಸಿದ್ದು, ಈ ಹಿನ್ನಲೆ ನೆರೆ ಪೀಡಿತ ಪ್ರದೇಶಕ್ಕೆ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿದ್ದರು. ಈ ವೇಳೆ ಮುಧೋಳ ದಲ್ಲಿ ಮಾತನಾಡಿದ ಅವರು, ‘ ರಾಜ್ಯದ ಜನತೆ ನಮ್ಮ ಬಗ್ಗೆ ತಪ್ಪು ತಿಳಿದುಕೊಂಡರೂ ಪರವಾಗಿಲ್ಲ. ಅಧಿಕಾರಿಗಳ ಮಾತು ಕೇಳದೆ ನದಿಗೆ ಇಳಿದರೆ ಲಾಠಿ ಪ್ರಯೋಗ ಮಾಡಲು ಸೂಚಿಸಿದ್ದೇನೆ ಎಂದರು.
ಮೀನು ಹಿಡಿಯುವುದು, ಕೃಷಿ ಚಟುವಟಿಕೆ ಎಂದು ಇಳಿಯುವುದು, ಸೆಲ್ಫಿಗಾಗಿ ನದಿ ಅಥವಾ ಹೊಳೆಗೆ ಇಳಿಯುವವರು ಒಳ್ಳೆ ಮಾತಿಗೆ ಗೌರವ ಕೊಡಲಿಲ್ಲ ಅಂದರೆ ಲಾಠಿ ಏಟು ನಿಶ್ಚಿತ.