• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಸ್ತೂರಿ ರಂಗನ್ ವರದಿ ಜಾರಿಗೆ ಭಾರೀ ವಿರೋಧ ವ್ಯಕ್ತವಾಗಿದೆ. ಹಾಗಾದ್ರೆ ಏನಿದು ಕಸ್ತೂರಿ ರಂಗನ್ ವರದಿ? ಇದಕ್ಕೆ ಯಾಕಿಷ್ಟು ವಿರೋಧ ?

ಕಸ್ತೂರಿ ರಂಗನ್ ವರದಿ ಜಾರಿಗೆ ಭಾರೀ ವಿರೋಧ ವ್ಯಕ್ತವಾಗಿದೆ. ಹಾಗಾದ್ರೆ ಏನಿದು ಕಸ್ತೂರಿ ರಂಗನ್ ವರದಿ? ಇದಕ್ಕೆ ಯಾಕಿಷ್ಟು ವಿರೋಧ ?

August 4, 2024
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

November 1, 2025
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

October 31, 2025
ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

October 31, 2025
ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

October 31, 2025
ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

October 31, 2025
ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

October 31, 2025
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

October 31, 2025
ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

October 30, 2025
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

October 30, 2025
2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

October 30, 2025
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

October 30, 2025
ಸರಕಾರದಿಂದ ದೊರೆಯುವ ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಕಾರ್ಯಕ್ರಮ, ಲೆನ್ಸ್ ಅಳಿವಡಿಕೆ, ಉಚಿತ ಕನ್ನಡಕ ವಿತರಣೆ ಮುಂತಾದ ಸೌಲಭ್ಯಗಳು ಈ ಪ್ರದೇಶದ ಜನರಿಗೆ ತಲುಪಿಸಲು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸದಾ ಸಿದ್ಧ : ಡಾ ಶಿಶಿರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, November 1, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

    ಸರಕಾರದಿಂದ ದೊರೆಯುವ ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಕಾರ್ಯಕ್ರಮ, ಲೆನ್ಸ್ ಅಳಿವಡಿಕೆ, ಉಚಿತ ಕನ್ನಡಕ ವಿತರಣೆ ಮುಂತಾದ ಸೌಲಭ್ಯಗಳು ಈ ಪ್ರದೇಶದ ಜನರಿಗೆ ತಲುಪಿಸಲು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸದಾ ಸಿದ್ಧ : ಡಾ ಶಿಶಿರ

    ಸರಕಾರದಿಂದ ದೊರೆಯುವ ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಕಾರ್ಯಕ್ರಮ, ಲೆನ್ಸ್ ಅಳಿವಡಿಕೆ, ಉಚಿತ ಕನ್ನಡಕ ವಿತರಣೆ ಮುಂತಾದ ಸೌಲಭ್ಯಗಳು ಈ ಪ್ರದೇಶದ ಜನರಿಗೆ ತಲುಪಿಸಲು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸದಾ ಸಿದ್ಧ : ಡಾ ಶಿಶಿರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಕಸ್ತೂರಿ ರಂಗನ್ ವರದಿ ಜಾರಿಗೆ ಭಾರೀ ವಿರೋಧ ವ್ಯಕ್ತವಾಗಿದೆ. ಹಾಗಾದ್ರೆ ಏನಿದು ಕಸ್ತೂರಿ ರಂಗನ್ ವರದಿ? ಇದಕ್ಕೆ ಯಾಕಿಷ್ಟು ವಿರೋಧ ?

by ಪ್ರಜಾಧ್ವನಿ ನ್ಯೂಸ್
August 4, 2024
in ಅಂತರರಾಜ್ಯ, ಇತರೆ, ದಕ್ಷಿಣ ಕನ್ನಡ, ರಾಜ್ಯ
0
ಕಸ್ತೂರಿ ರಂಗನ್ ವರದಿ ಜಾರಿಗೆ ಭಾರೀ ವಿರೋಧ ವ್ಯಕ್ತವಾಗಿದೆ. ಹಾಗಾದ್ರೆ ಏನಿದು ಕಸ್ತೂರಿ ರಂಗನ್ ವರದಿ? ಇದಕ್ಕೆ ಯಾಕಿಷ್ಟು ವಿರೋಧ ?
93
SHARES
267
VIEWS
ShareShareShare

ಪಶ್ಚಿಮ ಘಟ್ಟಗಳು ಭಾರತೀಯ ಪರ್ಯಾಯ ದ್ವೀಪದ ಪಶ್ಚಿಮ ಕರಾವಳಿಗೆ ಸಮಾನಾಂತರವಾಗಿ ಹಬ್ಬಿದ ಒಂದು ಪರ್ವತ ಶ್ರೇಣಿಯಾಗಿದೆ. ಪಶ್ಚಿಮ ಘಟ್ಟಗಳ ಒಟ್ಟು 1,64,280 ಚ.ಕಿ.ಮೀ. ಪ್ರದೇಶದಲ್ಲಿ ಸುಮಾರು 59.940 ಚ.ಕಿ.ಮೀ ವಿಸ್ತೀರ್ಣ ಪ್ರದೇಶ ಅಂದರೆ ಸುಮಾರು ಶೇಕಡಾ 36.49ರಷ್ಟು ಭಾಗವನ್ನು ಪರಿಸರ ಸೂಕ್ಷ್ಮ ಪ್ರದೇಶ  ಎಂದು ಗುರುತಿಸಲಾಗಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಪಶ್ಚಿಮ ಘಟ್ಟಗಳ ಈ ಸೂಕ್ಷ್ಮ ಪರಿಸರವು ಅಪರೂಪದ ಪ್ರಾಣಿಗಳು, ಪಕ್ಷಿಗಳು, ಗಿಡಮೂಲಿಕೆಗಳು, ಗಿಡ, ಮರ, ಬಳ್ಳಿಗಳು, ಸೂಕ್ಷ್ಮ ಜೀವಿಗಳು, ಸರಿಸೃಪಗಳು, ಜೀವ ನದಿಗಳ ತಾಣ ಎನ್ನುವುದು ಎಲ್ಲರಿಗೂ ತಿಳಿದ ವಿಚಾರ.

ಇದರಲ್ಲೂ ಮಾನವ ಹಸ್ತಕ್ಷೇಪ ಮಾಡುತ್ತಿರುವುದರಿಂದ ಪರಿಸರಕ್ಕೆ ಧಕ್ಕೆ ಆಗುತ್ತಿದೆ, ಆ ಮೂಲಕ ಜೀವ ಸಂಕುಲಕ್ಕೆ ಅಪಾಯ ಎದುರಾಗಲಿದೆ ಎನ್ನುವುದು ಪರಿಸರ ತಜ್ಞರ, ಜೀವವಿಜ್ಞಾನಿಗಳ ಆತಂಕ. ಇದಕ್ಕಾಗಿ ಕಸ್ತೂರಿ ರಂಗನ್‌ ವರದಿ  ತಯಾರಾಗಿದೆ. ಆದರೆ ಈ ವರದಿಗೆ ಇದೀಗ ಭಾರೀ ವಿರೋಧ ವ್ಯಕ್ತವಾಗಿದೆ. ಹಾಗಾದ್ರೆ ಏನಿದು ಕಸ್ತೂರಿ ರಂಗನ್ ವರದಿ? ಈ ವರದಿಯಲ್ಲಿ ಏನಿದೆ? ಇದಕ್ಕೆ ಯಾಕಿಷ್ಟು ವಿರೋಧ ವ್ಯಕ್ತವಾಗಿದೆ? ಅಷ್ಟಕ್ಕೂ ಕಸ್ತೂರಿ ರಂಗನ್ ಎಂದರೆ ಯಾರು?

ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆಯ ಉದ್ದೇಶದಿಂದ, ಅದರ ಬಗೆಗೆ ಪರಿಸರ ತಜ್ಞ ಮಾಧವ ಗಾಡ್ಗಿಲ್ ಎಂಬುವರ ಅಧ್ಯಕ್ಷತೆಯಲ್ಲಿ ಕೆಂದ್ರ ಸರ್ಕಾರ ಒಂದು ಸಮಿತಿ ರಚಿಸಿತು. ಅವರು 2011ರ ಆಗಸ್ಟ್ 31ರಂದು ಸರ್ಕಾರಕ್ಕೆ ತಮ್ಮ ವರದಿ ಸಲ್ಲಿಸಿದ್ರು.

ಗಾಡ್ಗಿಲ್ ವರದಿಯಲ್ಲಿ ಶೇ. 94ರಿಂದ 97% ಪಶ್ಚಿಮ ಘಟ್ಟಗಳ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಬೇಕೆಂದೂ ಮತ್ತು ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳವಾಗ ಅದು ಅಲ್ಲಿಯ ಪರಿಸರವನ್ನು ಜೀವ ವೈವಿಧ್ಯತೆಯ ಕ್ರಮವನ್ನು ಕೆಡಿಸದಿರುವ ಷರತ್ತಿನ ಮೇಲೆ ಅನುಮತಿ ನೀಡಬೆಕೆಂದು ಶಿಪಾರಸು ಮಾಡಿತು. ಈ ಭಾಗದಲ್ಲಿ ಬಹಳಷ್ಟು ತೋಟಗಳೂ, ವಸತಿ ಪ್ರದೇಶಗಳೂ, ಕೃಷಿ ಪ್ರದೇಶವೂ ಸೇರಿತ್ತು. ಇದರಲ್ಲಿ ಆಪ್ರದೇಶದ ಮುಕ್ಕಾಲು ಭಾಗವನ್ನು ನಿರ್ಬಂಧಿತ ಪರಿಸರ ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಲಾಗಿತ್ತು. ಆ ಕಮಿಟಿಯ ಆಪ್ರದೇಶದಲ್ಲಿ ಯಾವುದೇ ದೊಡ್ಡ ಹೊಸ ಅಣೆಕಟ್ಟುಗಳನ್ನು ಕಟ್ಟುಬಾರದು, ಈ ಪ್ರದೇಶ ವಿಶೇಷ ರಕ್ಷಣೆ ಮತ್ತು ಅದರ ಭೂಲಕ್ಷಣ, ವನ್ಯಜೀವಿಗಳ ಕಾಳಜಿ, ಫಲವತ್ತಾದ ಭೂಮಿಯನ್ನು ಉಳಿಸುವ ಅಗತ್ಯವಿದೆ. ಈ ಪ್ರದೇಶದಲ್ಲಿ, ಕೆಲವು ಐತಿಹಾಸಿಕ ಮೌಲ್ಯಗಳು ಸಹ ಇವೆ ಇತ್ಯಾದಿ ಕಾರಣಗಳನ್ನು ಕೊಟ್ಟಿತ್ತು.

ಗಾಡ್ಗಿಲ್ ಸಮಿತಿ ವರದಿಯು ತೀವ್ರ ಟೀಕೆಗೆ ಒಳಗಾಯಿತು. ಗಾಡ್ಗೀಳ್ ಸಮಿತಿ ವರದಿಯ ಕುಂದು ಕೊರತೆಯನ್ನು ನೀಗಿಸಲು ಕಸ್ತೂರಿರಂಗನ್ ಸಮಿತಿಯನ್ನು ನೇಮಿಸಲಾಯಿತು. ಕಸ್ತೂರಿರಂಗನ್ ಸಮಿತಿ ತನ್ನ ವರದಿಯನ್ನು 2013ರ ಏಪ್ರಿಲ್ 15 ರಂದು ಸಲ್ಲಿಸಿತು. ಇತರ 10 ಸದಸ್ಯರ ಸಮಿತಿಯ ಜೊತೆ, ಕೆ.ಕಸ್ತೂರಿರಂಗನ್ ಸಿದ್ಧಪಡಿಸಿದ ಪಶ್ಚಿಮ ಘಟ್ಟಗಳ ಈ ಕಸ್ತೂರಿರಂಗನ್ ವರದಿಯನ್ನು ಸರ್ಕಾರ ಸ್ವೀಕರಿಸಿದೆ.

ಕಸ್ತೂರಿ ರಂಗನ್‍ಸಮಿತಿ ಗುರುತಿಸಿರುವ ಪಶ್ಚಿಮ ಘಟ್ಟ ವ್ಯಾಪ್ತಿಯ 59,949 ಚ,ಕಿ.ವ್ಯಾಪ್ತಿಯ ಪ್ರದೇಶ ಅಂದರೆ ಶೇಕಡಾ 36.4ರಷ್ಚು ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಒಳಪಡುತ್ತದೆ. ಈ ಪ್ರದೇಶದಲ್ಲಿ ಗಣಿಗಾರಿಕೆ, ಕ್ವಾರಿ, ಮರಳುಗಾರಿಕೆ ಪರಿಸರ ವಿರೋಧಿ ಕೈಗಾರಿಕೆ, ಜಲವಿದ್ಯುತ್, ಪವನ ವಿದ್ಯುತ್ ಯೋಜನೆಗಳನ್ನು ಸಂಪೂರ್ಣ ನಿಷೇಧಿಸಬೇಕು. ಎಲ್ಲಾರೀತಿಯ ಗಣಿಗಾರಿಕೆ ಮುಂದಿನ 5 ವರ್ಷ ಮುಗಿತ್ತಿದ್ದಂತೆ ಸ್ಥಗಿತಗೊಳಿಸಬೇಕು. 20,000 ಚ,ಮೀ, ದೊಡ್ಡದಾದ ಯಾವುದೇ ಕಟ್ಟಡ ನಿರ್ಮಿಸುವಂತಿಲ್ಲ. ಇಎಸ್ಎನಿಂದ 10ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಕಾಮಗಾರಿ ನಡೆಸುದಿದ್ದರೂ ಪರಿಸರ ಇಲಾಖೆ, ಸ್ಥಳೀಯ ಗ್ರಾಮಸಭೆ ಅನುಮತಿ ಪಡೆಯಬೇಕು. ಈ ಪ್ರದೇಶದಲ್ಲಿ ಸಿಮೆಂಟು, ಕಲ್ಲು, ರಸಾಯನಿಕ ಬಳಸಲು, ಜನವಸತಿ ನಿರ್ಮಿಸಲು ಅವಕಾಶವಿಲ್ಲ.

ಕಸ್ತೂರಿ ರಂಗನ್ ಸಮತಿ ವರದಿಗೆ ಒಳಪಡುವ ಪ್ರದೇಶಗಳು

ಮಹಾರಾಷ್ಟ್ರ, ಗೋವಾ, ಕೇರಳ, ತಮಿಳುನಾಡು ಹಾಗೂ ಕರ್ನಾಟಕ ರಾಜ್ಯದ ಬೆಳಗಾವಿ, ಉತ್ತರಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ಕೊಡಗು ಮತ್ತು ಚಾಮರಾಜ ನಗರದ ಕೆಲವು ಜಿಲ್ಲೆಗಳ ಕೆಲ ಪ್ರದೇಶಗಳು ಸೇರಿ ಒಟ್ಟು 56,874 ಚದರ ಕಿಲೋ ಮೀಟರ್‌ ವಿಸ್ತೀರ್ಣದ ಪ್ರದೇಶವನ್ನು ಅತಿ ಸೂಕ್ಷ್ಮ ಪ್ರದೇಶವೆಂದು ಕಸ್ತೂರಿ ರಂಗನ್‌ ಸಮಿತಿ ವರದಿ ನೀಡಿದೆ. ಕರ್ನಾಟಕದಲ್ಲಿ ಪಶ್ಚಿಮಘಟ್ಟ 44,448 ಚ,ಕಿ.ಮೀ. ವಿಸ್ತೀರ್ಣ ಹೊಂದಿದೆ. ಅದರಲ್ಲಿ 20,668 ಚ.ಕಿ.ಮೀ. ಪ್ರದೇಶ ವರದಿ ಪ್ರಕಾರ ಪರಿಸರ ಸೂಕ್ಷ್ಮ ಪ್ರದೇಶದ (ಇಎಸ್ ಎ) ವ್ಯಾಪ್ತಿಯಲ್ಲಿ ಬರುವುದು. ಇದು 1573 ಗ್ರಾಮಗಳನ್ನು ಒಳಗೊಂಡಿದೆ. ರಾಜ್ಯ ಸರ್ಕಾರ ಇದನ್ನು 850 ಗ್ರಾಮಗಳಿಗೆ ಸೀಮಿತಗೊಳಿಸಬೇಕೆಂದು ಕೇಳಿದೆ.

ಕಸ್ತೂರಿ ರಂಗನ್ ವರದಿ ಅನುಷ್ಠಾನವಾದ್ರೆ ಪಶ್ಚಿಮ ಘಟ್ಟ ಹಾಗೂ ಮಲೆನಾಡು ಅತಿ ಸೂಕ್ಷ್ಮ ಪರಿಸರ ವಲಯವಾಗಿ ಪರಿವರ್ತನೆಯಾಗುತ್ತೆ. ಇಲ್ಲಿ ಮಾನವ ಹಸ್ತಕ್ಷೇಪವನ್ನು ಮಾಡುವಂತೆಯೇ ಇಲ್ಲ. ಇಡೀ ಭೂ ಭಾಗ ರಾಜ್ಯದ ನಿಯಂತ್ರಣ ಕಳೆದುಕೊಂಡು ಕೇಂದ್ರದ ಸುಪರ್ದಿಗೆ ಬರುತ್ತದೆ. ಇಲ್ಲಿರುವ ಆದಿವಾಸಿಗಳನ್ನು ಒಕ್ಕಲು ಎಬ್ಬಿಸಬೇಕಾಗುತ್ತದೆ. ವಿದ್ಯುತ್, ನೀರಾವರಿ ಸೇರಿದಂತೆ ಯಾವುದೇ ಕೈಗಾರಿಕೆ ನಡೆಸಲು ಕಷ್ಟ ಸಾಧ್ಯವಾಗಲಿದೆ. ಸದ್ಯ ಇರುವ ಕೈಗಾರಿಕೆಗಳನ್ನು 5 ವರ್ಷದೊಳಗೆ ಮುಚ್ಚಬೇಕಾಗುತ್ತದೆ.

ಮಲೆನಾಡು ಭಾಗದಲ್ಲಿ ಅತೀ ಹೆಚ್ಚು ಮಳೆ ಬೀಳುವುದರಿಂದ ಪ್ರಮುಖ ಬೆಳೆ ಏಲಕ್ಕಿ, ಕಾಫಿ, ಕಾಳು ಮೆಣಸು ಬೆಳೆ ಸಂಕಷ್ಟದಲ್ಲಿದ್ದು, ಬಹುತೇಕ ರೈತರು ಬೆಳೆ ನಷ್ಟ ಅನುಭವಿಸುತ್ತಿದ್ದಾರೆ. ಇದರ ನಡುವೆ ಕಾಡು ಪ್ರಾಣಿಗಳ ಹಾವಳಿ ಮಿತಿ ಮೀರಿದ್ದು, ರೈತರು ತಾವು ಬೆಳೆದ ಕೃಷಿ ಬೆಳೆಗಳನ್ನು ಉಳಿಸಿಕೊಳ್ಳುವುದು ಕಷ್ಟವಾಗಿದೆ. ಇದರಿಂದ ಹೊರ ಬರಲು ಕೆಲ ರೈತರು ತಮ್ಮ ಜಮೀನುಗಳಲ್ಲಿ ಬ್ಯಾಂಕ್‌ಗಳಿಂದ ಸಾಲ ಪಡೆದು ಹೋಂ ಸ್ಟೇಗಳನ್ನು ನಡೆಸಿ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಈ ಭಾಗದಲ್ಲಿ ಅತೀ ಹೆಚ್ಚು ಪ್ರವಾಸಿ ತಾಣ ಇರುವುದರಿಂದ ರೈತರು ಹೋಂ ಸ್ಟೇ ಸ್ಥಾಪಿಸಿದ್ದು, ಇದರಿಂದ ಬರುವ ಆದಾಯದಲ್ಲಿ ತಮ್ಮ ಕೃಷಿ ಜಮೀನಿನ ಕೆಲಸಗಳನ್ನು ಮಾಡಿಸುತ್ತಾರೆ. ಒಂದು ವೇಳೆ ಯೋಜನೆ ಜಾರಿಯಾದರೆ ಲಕ್ಷಾಂತರ ರೂ. ಖರ್ಚು ಮಾಡಿರುವ ತೋಟ, ಹೋಂ ಸ್ಟೇಗಳನ್ನು ತೆರವುಗೊಳಿಸುವ ಪರಿಸ್ಥಿತಿ ಬಂದು ಸಂಕಷ್ಟದಲ್ಲಿ ಸಿಲುಕಲಿದ್ದಾರೆ.

ಕೇಂದ್ರ ಸರ್ಕಾರದ ಅಧಿಸೂಚನೆ ಪ್ರಕಾರ ರಾಜ್ಯದ 1,553ಕ್ಕೂ ಹೆಚ್ಚು ಹಳ್ಳಿಗಳು ಈ ವ್ಯಾಪ್ತಿಗೆ ಬರುತ್ತದೆ. ಆದ್ರೆ, ಕೇಂದ್ರ ಸರ್ಕಾರದ ಮೊದಲ ಎರಡು ಬಾರಿಯ ಅಧಿಸೂಚನೆಯಲ್ಲಿ ಕೇರಳ ರಾಜ್ಯವೂ ಇತ್ತು. ಆದ್ರೆ ಮೂರನೇ ಬಾರಿ ಹೊರಡಿಸಿರುವ ಅಧಿಸೂಚನೆಯಲ್ಲಿ ಕೇರಳದ ಹೆಸರೇ ಇಲ್ಲವಾಗಿದೆ. ಹೀಗಾಗಿ, ಕರ್ನಾಟಕ ಸರ್ಕಾರವೂ ನಕ್ಷೆ ಸಹಿತವಾಗಿ ವಾದ ಮಂಡಿಸಬೇಕು, ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಲಾಗುತ್ತಿದೆ.

ಪಶ್ಟಿಮಘಟ್ಟ ಹಾಗೂ ಮಲೆನಾಡು ಭಾಗ ವಿವಿಧ ಯೋಜನೆಗಳಿಂದ ವೇಗವಾಗಿ ನಶಿಸುತ್ತಿದೆ. ಹೀಗಾಗಿ ಅದನ್ನು ಉಳಿಸಲು ಕಸ್ತೂರಿ ರಂಗನ್ ವರದಿ ಅನುಷ್ಠಾನವೊಂದೇ ದಾರಿ ಅನ್ನೋದು ಪರಿಸರ ಪ್ರೇಮಿಗಳು, ಪರಿಸರ ತಜ್ಞರ ವಾದ.

ಕಸ್ತೂರಿ ರಂಗನ್ ವರದಿ ಜಾರಿ ಕುರಿತಂತೆ  ರಾಜ್ಯ ಸರ್ಕಾರವು ಮಹತ್ವದ ಸಭೆ ನಡೆಸಿತು. ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಒಪ್ಪಿಕೊಳ್ಳುವುದಿಲ್ಲ ಹೇಳಿದ್ದಾರೆ. ಈಗಾಗಲೇ ಅರಣ್ಯ ರಕ್ಷಣೆ ಮಾಡಲಾಗುತ್ತಿದೆ, ಈ ರೀತಿ ವರದಿ ಅವೈಜ್ಞಾನಿಕವಾಗಿದೆ. ಕಾಡು ಕೂಡ ನಮ್ಮಲ್ಲಿ ಜಾಸ್ತಿ ಆಗಿದೆ. ಇನ್ನು ಪುನಃ ಅಧಿಸೂಚನೆ ಹೊರಡಿಸಲಾಗಿದೆ. ಅಲ್ಲದೆ ಸಿಎಂ ನೇತೃತ್ವದಲ್ಲಿ ಕೇಂದ್ರದ ಸಚಿವರನ್ನು ಭೇಟಿಯಾಗಿ ಇದನ್ನು ರದ್ದು ಮಾಡುವಂತೆ ಈಗಾಗಲೇ ಮನವಿ ಮಾಡಿದ್ದೇವೆ. ಮತ್ತೆ ಪಶ್ಚಿಮ ಘಟ್ಟದ ಶಾಸಕರ ನೇತೃತ್ವದ ನಿಯೋಗ ದೆಹಲಿಗೆ ತೆರಳಲು ನಿರ್ಧಾರ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಇಂತಹ ಅವೈಜ್ಞಾನಿಕ ವರದಿ ಒಪ್ಪೋದಕ್ಕೆ ಸಾಧ್ಯ ಇಲ್ಲ ಅಂತ ಸ್ಪಷ್ಟಪಡಿಸಿದ್ದಾರೆ.

ಮಂಗಳೂರು:ಪಶ್ಚಿಮ ಘಟ್ಟದ ಪ್ರದೇಶದಲ್ಲಿ ಪ್ರಾಕೃತಿಕ ವಿಕೋಪಗಳನ್ನು ತಡೆಯಲು ಹಾಗೂ ಜೀವ ವೈವಿಧ್ಯದ ಸೂಕ್ಷ್ಮ ಪ್ರದೇಶಗಳ ಸಂರಕ್ಷಣೆಗಾಗಿ ಕಸ್ತೂರಿರಂಗನ್ ವರದಿಯನ್ನು ಜಾರಿಗೊಳಿಸುವ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ರಾಜ್ಯದ ಮಾಜಿ ಅರಣ್ಯ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಪರಿಸರ ತಜ್ಞ ಪ್ರೊ|ಮಾಧವ ಗಾಡ್ಗೀಳ್ ಅವರು ಪಶ್ಚಿಮ ಘಟ್ಟದ ಜೀವ ವೈವಿಧ್ಯ ಸಂರಕ್ಷಣೆ ಕುರಿತು ಸಲ್ಲಿಸಿದ್ದ ವರದಿಗೆ ಜನರಿಂದ ವಿರೋಧ ವ್ಯಕ್ತವಾಗಿದ್ದರಿಂದ, ಅದನ್ನು ಪುನರ್‌ಪರಿಶೀಲಿಸಲು ಕೇಂದ್ರ ಸರ್ಕಾರ ಕಸ್ತೂರಿರಂಗನ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿತ್ತು.ಆ ವರದಿಗೂ ನಮ್ಮ ಜಿಲ್ಲೆಯಲ್ಲಿ ವಿರೋಧ ವ್ಯಕ್ತವಾಗಿತ್ತು.ನಾನು ಅರಣ್ಯ ಸಚಿವನಾಗಿದ್ದಾಗ, ಜನ ವಸತಿಗೆ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಕಸ್ತೂರಿ ರಂಗನ್ ವರದಿಗೆ ಆಕ್ಷೇಪಣೆ ಸಲ್ಲಿಸಿ, ಆ ವರದಿಯ ಕೆಲವೊಂದು ಅಂಶಗಳನ್ನು ಕೈಬಿಡುವಂತೆ ಸರ್ಕಾರ ಶಿಫಾರಸು ಮಾಡಿತ್ತು.ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರವನ್ನು ಉಳಿಸುವುದು ಕೇಂದ್ರ ಸರ್ಕಾರದ ಹೊಣೆ. ಈ ಬಗ್ಗೆ ಕೇಂದ್ರವು ಐದಾರು ಸಲ ಕರಡು ಅಧಿಸೂಚನೆ ಹೊರಡಿಸಿದ್ದರೂ ಅಂತಿಮ ಅಧಿಸೂಚನೆ ಪ್ರಕಟವಾಗಿಲ್ಲ.ಇದೀಗ, ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದ ಬಳಿಕ ಕೇಂದ್ರವು ಮತ್ತೊಮ್ಮೆ ಕರಡು ಅಽಸೂಚನೆ ಪ್ರಕಟಿಸಿದೆ.ಈ ವಿಚಾರದಲ್ಲಿ ರಾಜ್ಯಗಳಿಗೆ ಅಭಿಪ್ರಾಯ ಹೇಳುವುದಕ್ಕೆ ಮಾತ್ರ ಅಧಿಕಾರವಿದೆ.ವರದಿ ಜಾರಿ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳಬೇಕಿರುವುದು ಕೇಂದ್ರ ಸರಕಾರ.ಸುಮ್ಮನೆ ಈ ವಿಚಾರದಲ್ಲಿ ಕಾಲಹರಣ ಮಾಡುವ ಬದಲು ಪಶ್ಚಿಮ ಘಟ್ಟ ರಕ್ಷಣೆ ದೃಷ್ಟಿಯಿಂದ ಕೇಂದ್ರವು ಸ್ಪಷ್ಟ ನಿರ್ಧಾರವನ್ನು ತಳೆಯಬೇಕು ಎಂದು ಬಿ.ರಮಾನಾಥ ರೈ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಡಬ ತಾಲೂಕಿನ ಕೌಕ್ರಾಡಿ, ಗೋಳಿತೊಟ್ಟು, ಶಿರಾಡಿ, ಆಲಂತಾಯ, ಸಿರಿಬಾಗಿಲು, ಕೊಂಬಾರು, ಇಚ್ಲಂಪಾಡಿ, ಬಲ್ಯ, ಬಿಳಿನೆಲೆ, ದೋಳ್ಪಾಡಿ, ಬಳ್ಪ, ಏನೆಕಲ್ಲು, ಸುಬ್ರಹ್ಮಣ್ಯ, ಸುಳ್ಯ ತಾಲೂಕಿನ ನಾಲ್ಕೂರು, ಕೂತ್ಕುಂಜ, ಐನೆಕಿದು, ದೇವಚಳ್ಳ, ಹರಿಹರಪಲ್ಲತಡ್ಕ, ಮಿತ್ತೂರು, ಬಾಳುಗೋಡು, ಮಡಪ್ಪಾಡಿ, ಉಬರಡ್ಕ, ಕಲ್ಮಕಾರು, ಅರಂತೋಡು, ಆಲೆಟ್ಟಿ, ಸಂಪಾಜೆ,ತೊಡಿಕಾನ,ಬೆಳ್ತಂಗಡಿ ತಾಲೂಕಿನ ನಾರಾವಿ, ಮಲವಂತಿಗೆ, ಕುತ್ಲೂರು, ಸುಲ್ಕೇರಿ ಮೊಗ್ರು, ಶಿರ್ಲಾಲು, ನಾವರ, ಸವಣಾಲು, ನಡ, ಚಾರ್ಮಾಡಿ, ನಾವೂರು, ನೆರಿಯ, ಕಳಂಜ, ಪುದುವೆಟ್ಟು, ಶಿಶಿಲ, ಶಿಬಾಜೆ, ರೆಖ್ಯಾ ಗ್ರಾಮಗಳನ್ನು ಅತೀ ಸೂಕ್ಷ್ಮ ಪ್ರದೇಶಗಳೆಂದು ಕಸ್ತೂರಿರಂಗನ್ ವರದಿಯಲ್ಲಿ ಗುರುತಿಸಲಾಗಿದೆ.ಒಂದು ವೇಳೆ ವರದಿ ಜಾರಿಯಾದರೆ ಈ ಗ್ರಾಮಗಳ ವ್ಯಾಪ್ತಿಯಿಂದ ಕೆಲವು ಕಿ.ಮೀ.ಗಳ ದೂರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಗೆ ಒಳಪಡುತ್ತದೆ.ಇದರಿಂದ ಬಹುತೇಕ ಕಡಬ ತಾಲೂಕಿನ ಜನವಸತಿಗೂ ತೊಂದರೆಯಾಗಲಿದೆ ಎನ್ನುವ ಆತಂಕವನ್ನು ಈಗಾಗಲೇ ಹೋರಾಟಗಾರರು ತಿಳಿಸುತ್ತಲೇ ಬಂದಿದ್ದಾರೆ.

SendShare37Share
Previous Post

ವಿದ್ಯಾಮಾತಾ ಅಕಾಡೆಮಿ ಜೆಸಿಐ ಪುತ್ತೂರು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಜಂಟಿ ಸಹಯೋಗದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

Next Post

ಶತ್ರುಗಳನ್ನು ತ್ಯಜಿಸುವುದು ಇಸ್ರೇಲ್‌ನ ಡಿಎನ್‌ಎಯಲ್ಲಿಲ್ಲ; ಲೆಬನಾನ್‌ನ ರಾಜಧಾನಿ ಬೈರುತ್‌ನಲ್ಲಿ ಇಸ್ರೇಲ್ ಭಾರಿ ದಾಳಿ ನಡೆಸಿ ಸೇಡು ತೀರಿಸಿಕೊಂಡಿದೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..