ಪುತ್ತೂರು: ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ ಸಮಿತಿ ವತಿಯಿಂದ ಹಾಗು ವಜ್ರಮಾತಾ ಮಹಿಳಾ ಭಜನಾ ಮಂಡಳಿಯ ಸಹಯೋಗದಲ್ಲಿ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಆ.16ಕ್ಕೆ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಜರುಗಲಿದೆ ಎಂದು ಸಮರ್ಪಣಾ ಮಹಿಳಾ ಸೇವಾ ಸಮಿತಿ ಗೌರವಾಧ್ಯಕ್ಷೆ ಮಾಜಿ ಶಾಸಕಿಯಾಗಿರುವ ಶಕುಂತಳಾ ಶೆಟ್ಟಿಯವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.
ಪೂಜಾ ಸೇವೆ ಮಾಡಿಸಿದವರಿಗೆ ಹಿಂದೆ ರವಿಕೆ ಕಣವನ್ನು ಪ್ರಸಾದ ರೂಪದಲ್ಲಿ ನೀಡಲಾಗುತ್ತಿತ್ತು. 5ನೇ ವರ್ಷಕ್ಕೆ ಸೀರೆ ವಿತರಣೆ ಮಾಡಿದ್ದೇವು. ಅದಾದ ಬಳಿಕ ಮತ್ತೆ ರವಿಕೆಕಣ ವಿತರಣೆ ಮಾಡಲಾಗುತ್ತಿತ್ತು. ಇದೀಗ 17ನೇ ವರ್ಷದ ಪೂಜಾ ಕಾರ್ಯಕ್ರಮದಲ್ಲಿ ಸೀರೆ ವಿತರಣೆ ಮಾಡುತ್ತಿದ್ದೇವೆ ಎಂದು ಶಕುಂತಳಾ ಶೆಟ್ಟಿ ಅವರು ಹೇಳಿದರು.
ವೇ ಮೂ ಹರಿಪ್ರಸಾದ್ ವೈಲಾಯ ಅವರ ಪೌರೋಹಿತ್ಯದಲ್ಲಿ ನಡೆಯಲಿದೆ. ಮಧ್ಯಾಹ್ನ 11 ಗಂಟೆಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ನವೀನ್ ಭಂಡಾರಿ ಎಚ್ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಮಾಜಿ ಸದಸ್ಯ ಅಣ್ಣ ವಿನಯಚಂದ್ರ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಡ್ಯಾಶ್ ಮಾರ್ಕೆಟಿಂಗ್ ಸಂಸ್ಥೆಯ ನಿರ್ದೇಶಕಿ ನಳಿನಿ ಪಿ ಶೆಟ್ಟಿ, ಜಯಶ್ರೀ ಈಶ್ವರ ಭಟ್ ಪಂಜಿಗುಡ್ಡೆ, ಅನ್ನಪೂರ್ಣಿಮ ಆರ್ ರೈ ಕುತ್ಯಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಮಹಾಪೂಜೆ ನಡೆಯಲಿದೆ. ಬಳಿಕ ಅನ್ಬಪ್ರಸಾದ ವಿತರಣೆ ನಡೆಯಲಿದೆ ಎಂದವರು ಹೇಳಿದರು. ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷೆ ಶುಭಮಾಲಿನಿ ಮಲ್ಲಿ, ಕಾರ್ಯದರ್ಶಿ ಸುಜಯಾ, ಸದಸ್ಯೆ ಶಾರದಾ ಅರಸ್, ಒಡಿಯೂರು ವಜ್ರಮಾತಾ ಮಹಿಳಾ ವಿಕಾಸ ಸೇವಾ ಕೇಂದ್ರ ಪುತ್ತೂರು ಘಟಕದ ಅಧ್ಯಕ್ಷೆ ನಯನಾ ರೈ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.