ಮುಂಬಯಿ: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಗುರುವಾರ ನಡೆದಿದ್ದ ಪುರುಷರ 50 ಮೀ. ರೈಫಲ್ 3 ಪೊಸಿಷನ್ ಶೂಟಿಂಗ್ನಲ್ಲಿ ಕಂಚಿನ ಪದಕ ಗೆದ್ದ ಮಹಾರಾಷ್ಟ್ರದ 28 ವರ್ಷದ ಸ್ವಪ್ನಿಲ್ ಕುಸಾಲೆ ಅವರ ಈ ಸಾಧನೆಯನ್ನು ಪರಿಗಣಿಸಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ 1 ಕೋಟಿ ಬಹುಮಾನ ಪ್ರಕಟಿಸಿದ್ದಾರೆ. ಕೊಲ್ಹಾಪುರ ಜಿಲ್ಲೆಯ ಕಂಬಲ ವಾಡಿಯವರಾದ ಸ್ವಪ್ನಿಲ್, 2009ರಲ್ಲಿ ಮಹಾರಾಷ್ಟ್ರದ ಕ್ರೀಡಾ ಪ್ರಭೋದಿನಿ ಯೋಜನೆಯಡಿ ಕ್ರೀಡಾ ತರಬೇತಿಗೆ ಆಯ್ಕೆಯಾಗಿದ್ದರು.
ಒಲಿಂಪಿಕ್ಸ್ನಲ್ಲಿ ಪುರುಷರ 50 ಮೀ. ರೈಫಲ್ 3 ಪೊಸಿಷನ್ ಸ್ಪರ್ಧೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಹಾಗೂ 3ನೇ ರೈಫಲ್ ಶೂಟರ್ ಎಂಬ ಇತಿಹಾಸ ಬರೆದಿದ್ದಾರೆ. ಗುರುವಾರ ನಡೆದ ಫೈನಲ್ ಸ್ಪರ್ಧೆಯಲ್ಲಿ ಅವರು ಒಟ್ಟು 451.4 ಅಂಕ ಗಳಿಸುವ ಮೂಲಕ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದರು. ಸ್ವಪ್ನಿಲ್ ಕುಸಾಲೆಗೆ ಮಹರಾಷ್ಟ್ರ ಸರ್ಕಾರದ ಬಹುಮಾನ ಮೊತ್ತದ ಹೊರತಾಗಿಯೂ ಕೇಂದ್ರ ಸರ್ಕಾರದಿಂದ 30 ಲಕ್ಷ ರೂ. ಮತ್ತು ಭಾರತೀಯ ಒಲಿಂಪಿಕ್ಸ್ ಸಂಸ್ಥೆಯಿಂದ 50 ಲಕ್ಷ ರೂ. ಬಹುಮಾನ ಸಿಗಲಿದೆ.