ಪುತ್ತೂರು; ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಆ.10 ರಂದು `ಆಟಿಡೊಂಜಿ ಬಂಟೆರೆ ಸೇರಿಗೆ’ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ 17 ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ತಿಳಿಸಿದರು.
ಮಂಗಳವಾರ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ಅಪರಾಹ್ನ 3 ಗಂಟೆಗೆ ಕೊಂಬೆಟ್ಟು ಬಂಟರ ಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಸಂಜೆ 5 ಗಂಟೆಗೆ ಕಾವು ಹೇಮನಾಥ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಶಾಸಕ ಅಶೋಕ್ ಕುಮಾರ್ ರೈ ಅವರು ಉದ್ಘಾಟಿಸಲಿದ್ದಾರೆ. ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ಮಾಲಾಡಿ ಸಾಧಕರನ್ನು ಸನ್ಮಾನಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮುಂಬಯಿ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ಭಾಗಿಯಾಗಲಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಪ್ರಶಸ್ತಿಪ್ರದಾನ ಮಾಡಲಿದ್ದಾರೆ. ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವ ಆಶಯ ಮಾತುಗಳನ್ನಾಡಲಿದ್ದಾರೆ. ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸವಣೂರು ಸೀತಾರಾಮ ರೈ ಅವರು ವಿದ್ಯಾರ್ಥಿ ವೇತನ ವಿತರಣೆ ಮಾಡಲಿದ್ದಾರೆ.
ಸಾಧಕರಿಗೆ ಸನ್ಮಾನ
ಎಂಆರ್‍ಜಿ ಗ್ರೂಫ್ ಅಧ್ಯಕ್ಷ ಡಾ.ಕೆ.ಪ್ರಕಾಶ್ ಶೆಟ್ಟಿ, ಸಂಸದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಇಂಡಿಯಾ ಸೋಶಿಯಲ್ ಮತ್ತು ಕಲ್ಚರಲ್ ಸೆಂಟರ್ ಅಬುದಾಬಿ ಇದರ ಅಧ್ಯಕ್ಷ ಮಿತ್ರಂಪಾಡಿ ಜಯರಾಮ ರೈ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಕ್ಷೇತ್ರದ ಸಾಧಕರಿಗೆ ಚಿನ್ನದ ಪದಕದ ಪ್ರಶಸ್ತಿ;
ಅರಿಯಡ್ಕ ಕೃಷ್ಣ ರೈ ( ಕಡಮಜಲು ಕೃಷಿ ಪ್ರಶಸ್ತಿ), ಶಾಸಕ ಅಶೋಕ್ ರೈ ( ಬಂಟ ಶಿರೋಮಣಿ ಪ್ರಶಸ್ತಿ), ಮಾಜಿ ಶಾಸಕಿಯರಾದ ಶಕುಂತಳಾ ಟಿ ಶೆಟ್ಟಿ ಹಾಗೂ ಮಲ್ಲಿಕಾ ಪ್ರಸಾದ್ ( ಬಂಟ ಸಿರಿ ಪ್ರಶಸ್ತಿ), ಸುನೀಲ್ ಕುಮಾರ್ ಶೆಟ್ಟಿ (ಕ್ರೀಡಾ ಪ್ರಶಸ್ತಿ), ಎನ್.ಜಗನ್ನಾಥ ರೈ ಮಾದೋಡಿ (ಸಹಕಾರಿ ರಶ್ಮಿ ಪ್ರಶಸ್ತಿ), ಡಾ. ಎ.ಕೆ. ರೈ (ವೈದ್ಯಕೀಯ ಪ್ರಶಸ್ತಿ), ಕುದ್ಕಾಡಿ ಶೀನಪ್ಪ ರೈ ಕೊಡಿಂಕಿರಿ ( ಸಮಾಜ ಸೇವಾ ಮಿತ್ರ ಪ್ರಶಸ್ತಿ), ಸಂತೋಷ್ ಕುಮಾರ್ ರೈ ನಳೀಲು( ಉದ್ಯಮ ಸಿರಿ ಪ್ರಶಸ್ತಿ), ವಸಂತ ಕುಮಾರ್ ರೈ ಬಿ ( ದೇಶ ಸೇವಾ ಅಗರಿ ಪ್ರಶಸ್ತಿ), ಸತೀಶ್ ರೈ (ಉತ್ತಮ ಶಿಕ್ಷಕ ಅಶ್ವಿನಿ ಪ್ರಶಸ್ತಿ), ಡಾ. ಆಶಾ ಶಂಕರ ಭಂಡಾರಿ ಡಿಂಬ್ರಿ ( ಅರಣ್ಯ ಮಿತ್ರ ಪ್ರಶಸ್ತಿ), ಧನುಜ ( ಪಿಯುಸಿ ಸಾಧಕಿ ವಿದ್ಯಾ ಅರಿಯಡ್ಕ ಪ್ರಶಸ್ತಿ ಹಾಗೂ ಸ್ವಸ್ತಿ ಶೆಟ್ಟಿ ( ಎಸೆಸೆಲ್ಸಿ ಸಾಧಕಿ ವಿದ್ಯಾ ಚನಿಲ ಪ್ರಶಸ್ತಿ ) ಚಿನ್ನದ ಪದಕದೊಂದಿಗೆ ಪ್ರಶಸ್ತಿ ಪ್ರದಾನ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಅಪರಾಹ್ನ 3 ಗಂಟೆಯಿಂದ ವಿದುಷಿ ನಯನಾ ಡಿ.ರೈ ಮತ್ತು ವಿದುಷಿ ಸ್ವಸ್ತಿಕಾ ಆರ್.ಶೆಟ್ಟಿ ಅವರಿಂದ ನೃತ್ಯಧಾರೆ ಹಾಗೂ ದಿನೇಶ್ ಕೊಡಪದವು ತಂಡದಿಂದ ಯಕ್ಷ ಹಾಸ್ಯ ವೈಭವ ನಡೆಯಲಿದೆ.
ಅರಿಯಡ್ಕ ಲಕ್ಷ್ಮೀ ನಾರಾಯಣ ಶೆಟ್ಟಿ, ಅರಿಯಡ್ಕ ಚಿಕ್ಕಪ್ಪ ರೈ, ಬೂಡಿಯಾರ್ ರಾಧಾಕೃಷ್ಣ ರೈ, ದಯಾನಂದ ರೈ ಮನವಳಿಕೆ, ಶಶಿಕುಮಾರ್ ರೈ ಬಾಲ್ಯೊಟ್ಟು, ಕುಂಬ್ರ ದುರ್ಗಾಪ್ರಸಾದ್ ರೈ, ಸಾಜ ರಾಧಾಕೃಷ್ಣ ಆಳ್ವ, ಗೀತಾ ಮೋಹನ್ ರೈ, ಹರ್ಷಕುಮಾರ್ ರೈ, ಪವನ್ ಶೆಟ್ಟಿ ಕಂಬಳತ್ತಡ್ಕ ಅವರು ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಅವರು ತಿಳಿಸಿದರು. ಬಂಟರ ಯಾನೆ ನಾಡವರ ಸಂಘ ಮಂಗಳೂರು, ಮಹಿಳಾ ಬಂಟರ ಸಂಘ, ಯುವ ಬಂಟರ ಸಂಘ, ವಿದ್ಯಾರ್ಥಿ ಬಂಟರ ಸಂಘಗಳ ಜಂಟಿ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಪತ್ರಿಕಾಗೋಷ್ಟಿಯಲ್ಲಿ ಸಂಘದ ನಿರ್ದೇಶಕ ದಂಬೆಕಾನ ಸದಾಶಿವ ರೈ, ಮಾತೃಸಂಘದ ತಾಲೂಕು ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಗೀತಾ ಮೋಹನ್ ರೈ, ಕಾರ್ಯದರ್ಶಿ ನಿತ್ಯಾನಂದ ರೈ ಮನವಳಿಕೆ, ಮಾತೃಸಂಘದ ತಾಲೂಕು ಸಹಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ನಿರ್ದೇಶಕ ರವಿಪ್ರಸಾದ್ ಶೆಟ್ಟಿ ಬನ್ನೂರು ಉಪಸ್ಥಿತರಿದ್ದರು.
























