ಕೇರಳದ ಕಾಸರಗೋಡಿನ ವಿದ್ಯಾನಗರ ನಿವಾಸಿ ವಿಸ್ಮಯಾಳನ್ನು ಮೊಹಮ್ಮದ್ ಅಶ್ಫಾಕ್ ಎಂಬ ನಟೋರಿಯಸ್ ಕ್ರಿಮಿನಲ್ ಪ್ರೀತಿಯ ಬಲೆಗೆ ಬೀಳಿಸಿದ್ದ. ಕೇವಲ ಎರಡೇ ತಿಂಗಳಲ್ಲಿ ಆತ ಪ್ರೀತಿಯ ಖೆಡ್ಡಾಕ್ಕೆ ಬೀಳಿಸಿದ್ದ ಎಂದು ಆರೋಪಿಸಲಾಗಿದೆ. ಮಂಗಳೂರಿನ ಉಳ್ಳಾಲದ ಅತ್ತೆ ಮನೆಯಲ್ಲಿದ್ದುಕೊಂಡು ಬಿಸಿಎ ಶಿಕ್ಷಣ ಪಡೆಯುತ್ತಿದ್ದ ವಿಸ್ಮಯಾಳನ್ನು ಜೂ.6ರಂದು ಅಲ್ಲಿಂದಲೇ ಕರೆದುಕೊಂಡು ಹೋಗಿದ್ದ ಅಶ್ಫಾಕ್.
ಬಳಿಕ ವಿದ್ಯಾನಗರ ಠಾಣೆ ಪೊಲೀಸರು ಆಕೆಯನ್ನು ಪತ್ತೆಹಚ್ಚಿ ಮಂಗಳೂರಿನ ಕೌನ್ಸಿಲಿಂಗ್ ಕೇಂದ್ರದಲ್ಲಿರಿಸಿದ್ದರು. ಆದರೆ ಅಶ್ಫಾಕ್ ನೊಂದಿಗೆ ತೆರಳುವುದಾಗಿ ಹೇಳಿದ್ದಳು. ವಿಸ್ಮಯಳನ್ನು ಮತಾಂತರ ನಡೆಸಿರುವುದಾಗಿ ಆಕೆಯ ತಂದೆ ಆರೋಪಿಸಿದ್ದರು.
ಬಳಿಕ ಮಂಗಳೂರಿನ ವಿಎಚ್‌ಪಿ ನಾಯಕರನ್ನು ಭೇಟಿಯಾಗಿ ವಿಸ್ಮಯಾ ತಂದೆ ಮಗಳನ್ನು ಉಳಿಸಿಕೊಡಿ ಎಂದು ಕಣ್ಣೀರು ಹಾಕಿದ್ದರು. ಕೊನೆಗೂ ಆಕೆ ತಂದೆಯ ಕೈಗೆ ಸಿಗದೇ ಅಶ್ಫಾಕ್ ನನ್ನು ವಿಸ್ಮಯಾ ಮುಸ್ಲಿಂ ಪದ್ಧತಿ ಪ್ರಕಾರ ವಿವಾಹವಾಗಿದ್ದಾಳೆ. ಈತ ಕೇರಳ ಹೈಕೋರ್ಟ್‌ಗೆ ಹೆಬಿಯಾಸ್ ಕಾರ್ಪಸ್ ಅರ್ಜಿ ಹಾಕಿದ್ದ. ಇದೀಗ ಕೇರಳ ಹೈಕೋರ್ಟ್ ಆದೇಶದಂತೆ ವಿಸ್ಮಯಾಳನ್ನು ಮದುವೆಯಾಗಿದ್ದಾನೆ.
ಇದೀಗ ಆಕೆ ಮದುವೆಯಾಗಿರುವ ಫೋಟೊವನ್ನು ಫೇಸ್‌ಬುಕ್‌ಗೆ ಅಪ್ಲೋಡ್ ಮಾಡಿರುವ ವಿಶ್ವಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅವರು, ‘ಕ್ಷಮಿಸಿ ವಿನೋದ್‌ರವರೇ, ನಿಮ್ಮ ಮಗಳನ್ನು ಉಳಿಸಲು ನಮ್ಮಿಂದ ಸಾಧ್ಯವಾಗಿಲ್ಲ’ ವಿಸ್ಮಯಾಟ ತಂದೆಯ ಬಳಿ ಕ್ಷಮೆ ಕೋರಿದ್ದಾರೆ.
ಕ್ಷಮಿಸಿ ವಿನೋದ್ ಅವರೇ, ನಿಮ್ಮ ಮಗಳನ್ನು ಉಳಿಸಲು ನಮ್ಮಿಂದ ಸಾಧ್ಯವಾಗಿಲ್ಲ’ ಎಂದು ಯುವತಿ ವಿಸ್ಮಯಳ ತಂದೆಯ ಬಳಿ ಕ್ಷಮೆ ಕೋರಿ ವಿಶ್ವಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಪೋಸ್ಟ್ ಮಾಡಿದ್ದಾರೆ. ಈ ಹಿಂದೆ ಮಗಳನ್ನು ಉಳಿಸಿಕೊಡಿ ಎಂದು ವಿಎಚ್‌ಪಿ ಮುಖಂಡರ ಬಳಿಗೆ ವಿಸ್ಮಯಳ ತಂದೆ ವಿನೋದ್ ಬಂದಿದ್ದರು.
ಕೇರಳದ ಕುಖ್ಯಾತ ಕ್ರಿಮಿನಲ್ ವಿರುದ್ಧ ಕೇಳಿಬಂದಿದ್ದ ಲವ್ ಜಿಹಾದ್ ಆರೋಪ ಕೇಸ್‌ಗೆ ಮತ್ತೊಂದು ಟ್ವಿಸ್ಟ್ ದೊರೆತಿದೆ. ತಂದೆ- ತಾಯಿ ಎಷ್ಟೇ ಒತ್ತಾಯಿಸಿದರೂ, ಹಿಂದೂ ಸಂಘಟನೆಗಳು ಹೋರಾಡಿದರೂ ಹಿಂದೂ ಯುವತಿ ವಿಸ್ಮಯ, ತನ್ನ ಪ್ರೇಮಿ ಮೊಹಮ್ಮದ್ ಅಶ್ಫಾಕ್‌ನನ್ನು ಮದುವೆಯಾಗಿದ್ದಾಳೆ. ಕೇರಳ ಹೈಕೋರ್ಟ್ ಇವರ ಮದುವೆಗೆ ಗ್ರೀನ್ ಸಿಗ್ನಲ್ ನೀಡಿದೆ.
ಕೇರಳದ ಕಾಸರಗೋಡಿನ ವಿದ್ಯಾನಗರ ನಿವಾಸಿಯಾಗಿರುವ ವಿಸ್ಮಯಿ ಅಶ್ಫಾಕ್ ಪ್ರಕರಣ ಕರಾವಳಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಮಂಗಳೂರಿನ ಉಳ್ಳಾಲದ ಅತ್ತೆ ಮನೆಯಲ್ಲಿ ಇದ್ದುಕೊಂಡು ಮಂಗಳೂರಿನಲ್ಲಿ ಬಿಸಿಎ ಶಿಕ್ಷಣ ಪಡೆಯುತ್ತಿದ್ದ ವಿಸ್ಮಯಳನ್ನು ವಿದ್ಯಾನಗರದಲ್ಲಿದ್ದಾಗಲೇ ಅಶ್ಫಾಕ್ ಪ್ರೀತಿಯ ಬಲೆಗೆ ಬೀಳಿಸಿದ್ದ. ಎರಡು ತಿಂಗಳ ಪರಿಚಯದಲ್ಲೇ ಈತ ವಿಸ್ಮಯಳ ಬ್ರೇನ್‌ವಾಶ್ ಮಾಡಿದ್ದಾನೆ ಎಂದು ಆಕೆಯ ಹೆತ್ತವರು ಆರೋಪಿಸಿದ್ದಾರೆ. ಈತ ಕ್ರಿಮಿನಲ್ ರೆಕಾರ್ಡ್ ಹೊಂದಿದ್ದಾನೆ ಎನ್ನಲಾಗಿದೆ.