ವಯನಾಡ್ ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ.
ಪ್ರಧಾನಿ ಮೋದಿ ಕಣ್ಣೂರಿಗೆ ಆಗಮಿಸುತ್ತಿದ್ದಂತೆ, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಧಾನಿಯವರನ್ನು ಸ್ವಾಗತಿಸಿದರು.
ಕಲ್ಪಟ್ಟಾದಿಂದ ಚೂರಲ್‌ಮಲಗೆ ರಸ್ತೆ ಮೂಲಕ ಪ್ರಯಾಣಿಸಿದ್ದಾರೆ. ಕಣ್ಣೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಹೆಲಿಕಾಪ್ಟರ್ ಮೂಲಕ ವಯನಾಡ್ ತಲುಪಿದರು. ನಂತರ ಭೂಕುಸಿತ ಸಂಭವಿಸಿದ ಮುಂಡಕೈ- ಚೂರಲ್‌ಮಲ-ಪುಂಚಿರಿಮಟ್ಟಂ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಾಯಿತು.
ಪ್ರಧಾನಮಂತ್ರಿಯವರೊಂದಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕೇಂದ್ರ ಸಚಿವ ಸುರೇಶ್ ಗೋಪಿ ಮತ್ತಿತರರು ಉಪಸ್ಥಿತರಿದ್ದರು. ಶಿಬಿರದಲ್ಲಿರುವವರನ್ನು ಮೋದಿ ಖುದ್ದಾಗಿ ಭೇಟಿ ಮಾಡಿ ಮಾತನಾಡಲಿದ್ದಾರೆ. ಸಂತ್ರಸ್ತರ ಪುನರ್ವಸತಿಗಾಗಿ ಕೇಂದ್ರದಿಂದ 2000 ಕೋಟಿ ವಿಶೇಷ ಪ್ಯಾಕೇಜ್ ಕೋರಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಪ್ರಧಾನಿಯವರು ಸಂತ್ರಸ್ತ ಜನರನ್ನು ಭೇಟಿ ಮಾಡಲಿದ್ದಾರೆ. ಪರಿಹಾರ ಶಿಬಿರಗಳು ಮತ್ತು ಆಸ್ಪತ್ರೆಗಳಲ್ಲಿ ಇರುವವರೊಂದಿಗೆ ಅವರು ಮಾತನಾಡಲಿದ್ದಾರೆ. ನಂತರ ವಯನಾಡ್ ಕಲೆಕ್ಟರೇಟ್ ತಲುಪಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. 3.15ಕ್ಕೆ ಕಣ್ಣೂರಿಗೆ ಹಿಂತಿರುಗಲಿದ್ದು ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 3.55ಕ್ಕೆ ದೆಹಲಿಗೆ ಹೊರಡಲಿದ್ದಾರೆ.