ಭಾಜಪ ಈ ಮಟ್ಟಿಗೆ ಬೆಳೆದಿರುವುದು ಸಾಮಾನ್ಯ ಕಾರ್ಯಕರ್ತರಿಂದ, ಬಿಜೆಪಿ ಕಾರ್ಯಕರ್ತರ ಪಕ್ಷ.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಪ್ರಚಾರದಲ್ಲಿ ಕ್ಯಾ.ಬ್ರಿಜೇಶ್ ಚೌಟ ಹೇಳಿಕೆ.
ಮಂಗಳೂರು: ಮಂಗಳೂರಿನಲ್ಲಿ ಎಪ್ರಿಲ್ 14 ರ ಆದಿತ್ಯವಾರ ನಡೆಯಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬೃಹತ್ ರೋಡ್ ಶೋ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕು. ಪ್ರಧಾನಿಯವರನ್ನು ಹತ್ತಿರದಿಂದ ಭೇಟಿ ಮಾಡುವ ಅವಕಾಶ ರೋಡ್ ಶೋ ಸಂದರ್ಭ ಸಿಗಲಿದ್ದು, ಮೂರನೇ ಬಾರಿ ದೇಶದ ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಅಭೂತಪೂರ್ವ ಬೆಂಬಲ ಸೂಚಿಸೋಣ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಾಪ್ಟನ್ ಬ್ರಿಜೇಶ್ ಚೌಟ ಮನವಿ ಮಾಡಿದರು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರ, ಪ್ರಮುಖ ಮುಖಂಡರ ಮನೆಗಳಿಗೆ ಭೇಟಿ ನೀಡಿದ ಸಂದರ್ಭ ಮಾತನಾಡಿದರು.
ಮೊದಲಿಗೆ ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿ ದಿನದ ಪ್ರವಾಸ ಆರಂಭಿಸಿ ಕ್ಯಾಪ್ಟನ್
ಕಾರ್ಯಕರ್ತರ ಭೇಟಿಯ ಸಂದರ್ಭ ಸಿಗುವ ಸಲಹೆ, ಮೂಡುವ ಜನಾಭಿಪ್ರಾಯಗಳನ್ನು ಆಧರಿಸಿ ಅವುಗಳನ್ನು ಕಾರ್ಯರೂಪಕ್ಕೆ ತರುವ ಇಚ್ಛೆ ಹೊಂದಿದ್ದೇನೆ. ಚುನಾವಣಾ ಪ್ರಚಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವ ಕಾರ್ಯಕರ್ತರ ಉತ್ಸಾಹದಿಂದ ನನಗೆ ಹೆಚ್ಚಿನ ಬಲ ಬಂದಂತಾಗಿದೆ ಎಂದರು.