ಬೆಂಗಳೂರಿನಲ್ಲಿ ಸ್ವಾತಂತ್ರೋತ್ಸವ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರಿನ ಮಾಣಿಕ್ ಶಾ ಪರೇಡ್ ಗ್ರೌಂಡ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು.
ಯಾವುದೇ ಗ್ಯಾರಂಟಿಗಳು ನಿಲ್ಲುವುದಿಲ್ಲ – ಸಿದ್ದರಾಮಯ್ಯ ಸ್ಪಷ್ಟನೆ
ರಾಜ್ಯದಲ್ಲಿ ಕಳೆದ ವರ್ಷ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಜಾರಿಗೊಳಿಸಲಾಗಿರುವ ಐದು ಗ್ಯಾರಂಟಿಗಳು ಮುಂದುವರಿಯುತ್ತವೆ. ಯಾವುದೇ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನಡೆಸಿ ವಿಧಾನಸೌಧಕ್ಕೆ ಆಗಮಿಸಿದ ಅವರನ್ನು ಮಾಧ್ಯಮಗಳು ಗ್ಯಾರಂಟಿಗಳ ಮುಂದುವರಿಕೆ ಕುರಿತಂತೆ ಮತ್ತೊಮ್ಮೆ ಸ್ಪಷ್ಟನೆ ಕೇಳಿದರು. ಆಗ ಅವರು ಮೇಲಿನಂತೆ ಉತ್ತರಿಸಿದರು. ಧ್ವಜಾರೋಹಣದ ನಂತರ ಮಾಡಿದ್ದ ಸ್ವಾತಂತ್ರ್ಯೋತ್ಸವದ ಭಾಷಣದಲ್ಲೂ ಅವರು ಗ್ಯಾರಂಟಿಗಳ ಮುಂದುವರಿಕೆ ಬಗ್ಗೆ ಮಾತನಾಡಿದ್ದರು.