ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಪುತ್ತೂರು ತಾಲೂಕಿನ ಅಖಿಲ ಕನಾ೯ಟಕ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ). ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ).ಪುತ್ತೂರು ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆ ಪುತ್ತೂರು ಯೋಜನಾ ಕಛೇರಿ ಸಭಾಂಗಣದಲ್ಲಿ ಜರುಗಿತ್ತು. ಕಾಯ೯ಕ್ರಮದ ಅಧ್ಯಕ್ಷತೆಯನ್ನು ತಾಲೂಕು ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದಂತಹ ಮಹಾಬಲ ರೈ ಇವರು ವಹಿಸಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಪದ್ಮನಾಭ ಶೆಟ್ಟಿ ಇವರು ದೀಪ ಪ್ರಜ್ವಲಿಸಿ ಕಾಯ೯ಕ್ರಮಕ್ಕೆ ಚಾಲನೆ ನೀಡಿದರು. ದ ಕ 2 ಜಿಲ್ಲೆಯ ಗೌರವಾನ್ವಿತ ನಿರ್ದೇಶಕರಾದ ಶ್ರೀ ಪ್ರವೀಣ್ ಕುಮಾರ್ ಕ್ಷೇತ್ರ ಯೋಜನಾಧಿಕಾರಿಗಳಾದ ಶ್ರೀ ಶಶಿಧರ್ ಮತ್ತು ಜನಜಾಗೃತಿ ವಲಯಧ್ಯಕ್ಷರ, ಒಕ್ಕೂಟ ವಲಯಧ್ಯಕ್ಷರ ಹಾಗೂ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರ ಗೌರವ ಉಪಸ್ಥಿತಿಯಲ್ಲಿ ಮದ್ಯಮುಕ್ತ ಚುನಾವಣೆಯನ್ನು ನಡೆಸುವ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಮದ್ಯಮುಕ್ತ ಚುನಾವಣೆಯ ಕರಪತ್ರವನ್ನು ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿಗಳಾದ ಶ್ರೀ ಗಣೇಶ್ ಆಚಾರ್ಯ ಕರಪತ್ರದಲ್ಲಿನ ವಿವರವನ್ನು ಸಭೆಯಲ್ಲಿ ತಿಳಿಸಿದರು, ಕಾಯ೯ಕ್ರಮದಲ್ಲಿ ಜನಜಾಗೃತಿ ವತಿಯಿಂದ ನಡೆಸುವ ಕಾಯ೯ಕ್ರಮಗಳ ಬಗ್ಗೆ 2024-2025 ನೇ ಸಾಲಿನ ಕ್ರಿಯಾ ಯೋಜನೆಯ ಬಗ್ಗೆ ಚಚಿ೯ಸಲಾಯಿತು. ಈ ಸಂದರ್ಭದಲ್ಲಿ ತಾಲೂಕಿನ ಎಲ್ಲಾ ವಲಯದ ಜನಜಾಗೃತಿ ವಲಯಾದ್ಯಕ್ಷರು, ಒಕ್ಕೂಟ ವಲಯಧ್ಯಕ್ಷರು ಜನಜಾಗೃತಿ ಸದಸ್ಯರು, ಮೇಲ್ವಿಚಾರಕರು, ನವಜೀವನ ಸಮಿತಿ ಪೋಷಕರು ಉಪಸ್ಥಿತರಿದ್ದರು