ಸಂಘವು ತನ್ನ ಸಾಮಾಜಿಕ ಕಾರ್ಯದ ಮೂಲಕ ಶಾಖೆಗಳ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಗಳಲ್ಲಿ 5 ರಿಂದ 10 ನೇ ತರಗತಿಯಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿಧ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ತನ್ನ ಧರ್ಮಾರ್ಥ ಮತ್ತು ವಿದ್ಯಾಸಂಸ್ಥೆ ನಿಧಿಯಿಂದ ಸಹಾಯಧನವನ್ನು ಮಹಾಸಭೆಯ ದಿನದಂದು ನೀಡಿಕೊಂಡು ಬರುತ್ತಿದ್ದು, ಈವರೆಗೆ ಒಟ್ಟು ರೂ.21,73,000 ಮೊತ್ತವನ್ನು ಒಟ್ಟು 1,067 ವಿಧ್ಯಾರ್ಥಿಗಳಿಗೆ ವಿತರಿಸಿರುತ್ತೇವೆ. ಮಾತ್ರವಲ್ಲದೆ ಹಲವಾರು ಸಂಘ ಸಂಸ್ಥೆಗಳಿಗೆ ಆರ್ಥಿಕ ನೆರವನ್ನು ಕೂಡ ನೀಡಿರುತ್ತೇವೆ. ದಿನಾಂಕ 24-08-2024 ರಂದು ನಡೆಯುವ ಸಂಘದ 2023-24ನೇ ಸಾಲಿನ ಮಹಾಸಭೆಯ ನಂತರ ನಡೆಯುವ ಸಮಾರಂಭದಲ್ಲಿ ಈ ವರ್ಷ 8 ಮತ್ತು 9ನೇ ತರಗತಿಯಲ್ಲಿ ಕಲಿಯುತ್ತಿರುವ 250 ಮಕ್ಕಳಿಗೆ ತಲಾ 2,000/- ರಂತೆ ವಿಧ್ಯಾರ್ಥಿ ವೇತನವನ್ನು ಗಣ್ಯರ ಉಪಸ್ಥಿತಿಯಲ್ಲಿ ವಿತರಿಸಲಾಗುವುದು. ಈ ಸಮಾರಂಭದ ಉದ್ಘಾಟಣೆಯನ್ನು ಜುಬಿನ್ ಮೊಹಾಪಾತ್ರ, ಸಹಾಯಕ ಆಯುಕ್ತರು ಪುತ್ತೂರು ಉಪವಿಭಾಗ ಇವರು ಮಾಡಲಿದ್ದಾರೆ, ಅಧ್ಯಕ್ಷತೆಯನ್ನು ಅಶ್ವಿನ್ ಎಲ್ ಶೆಟ್ಟಿ, ಆಡಳಿತಾಧಿಕಾರಿ ವಿದ್ಯಾರಶ್ಮಿ ವಿದ್ಯಾಲಯ ಸವಣೂರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಲೋಕೇಶ್ ಎಸ್ ಆರ್ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪುತ್ತೂರು ಮತ್ತು ಯಸ್. ಯಂ. ರಘು, ಸಹಕಾರ ಸಂಘಗಳ ಸಹಾಯಕ ನಿಬಂಧಕರು ಪುತ್ತೂರು, ಇವರುಗಳು ಭಾಗವಹಿಸಲಿದ್ದಾರೆ.
ಪುತ್ತೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು 22 ವರ್ಷಗಳಿಂದ ಸಹಕಾರಿ ಕ್ಷೇತ್ರಗಳಲ್ಲಿ ತನ್ನ ಸೇವೆಯನ್ನು ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ಮತ್ತು ಕಡಬ ತಾಲೂಕಿನಲ್ಲಿರುವ 14 ಶಾಖೆಗಳ ಮೂಲಕ ನೀಡಿಕೊಂಡು ಬರುತ್ತಿದ್ದು, 2023-24 ನೆ ಸಾಲಿನ ಆರ್ಥಿಕ ವರ್ಷದಲ್ಲಿ ತನ್ನ ಸಂಘದ ಸದಸ್ಯರ ಸಹಕಾರದಿಂದ ಅತ್ಯುತ್ತಮ ಕಾರ್ಯದಕ್ಷತೆಯನ್ನು ಸಾದಿಸಿ ಸಂಘವು 728 ಕೋಟಿ ರೂ ಗಳ ದಾಖಲೆಯ ವ್ಯವಹಾರವನ್ನು ನಡೆಸಿ ರೂ. 1.65 ಕೋಟಿ ರೂ ಗಳಷ್ಟು ಲಾಭವನ್ನು ಗಳಿಸಿರುತ್ತದೆ.